ನವದೆಹಲಿ:ದೇಶದ ಪ್ರತಿಷ್ಠಿತ ಯೂನಿವರ್ಸಿಟಿಗಳಲ್ಲಿ ಒಂದಾದ ಜವಾಹರ್​ಲಾಲ್​ ನೆಹರೂ ವಿಶ್ವವಿದ್ಯಾಲಯ ಒಂದಿಲ್ಲೊಂದು ವಿಚಾರಕ್ಕೆ ದೇಶದ ಜನರ ಗಮನ ಸೆಳೆಯುತ್ತಿರುತ್ತದೆ. ಇದೀಗ ಘಟನೆ ಒಂದರಲ್ಲಿ ಕೆಲವು ಕಿಡಿಗೇಡಿಗಳು ಕ್ಯಾಂಪಸ್​ನ ಆವರಣದಲ್ಲಿ ಪ್ರಚೋದನಕಾರಿ ಗೋಡೆ ಬರಹಗಳನ್ನು ಬರೆದು ವಿಕೃತಿ ಮೆರೆದಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋ ವೈರಲ್​ ಆಗಿದ್ದು, ಭಾಗವ ಜಲೇಗಾ (ಕೇಸರಿ ಉರಿಯುತ್ತದೆ), ಫ್ರೀ ಕಾಶ್ಮೀರ, ನಿಮ್ಮ ಗುಂಡಿಯನ್ನು ತೋಡಲಾಗಿದೆ ಎಂದು ಪ್ರಚೋದನಕಾರಿ ಬರಹಗಳನ್ನು ಗೋಡೆಗಳ ಮೇಲೆ ಗೀಚಲಾಗಿದೆ.
Chaos again in#JNU…Anti-national slogans written on the walls of JNU.JNU walls painted with slogans like 'Saffron will burn, Free Kashmir and Indian Occupied Kashmir'.pic.twitter.com/ljUXSYjciJ
ಇದನ್ನೂ ಓದಿ:ಏಷ್ಯನ್​ ಗೇಮ್ಸ್; ಟ್ರ್ಯಾಪ್​ ಶೂಟಿಂಗ್ ಪುರುಷರ ವಿಭಾಗದಲ್ಲಿ ಚಿನ್ನ ಗೆದ್ದ ಭಾರತ
ಘಟನೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. 2022ರಲ್ಲೂ ಬ್ರಾಹ್ಮಣ ವಿರೋಧಿ ಹೇಳಿಕೆಗಳನ್ನು ಕ್ಯಾಂಪಸ್​ನ ಆವರಣದಲ್ಲಿರುವ ಗೋಡೆಗಳ ಮೇಲೆ ಬರೆಯಲಾಗಿತ್ತು. ವ್ಯಾಪಕ ಆಕ್ರೋಶ ಹಾಗೂ ಪ್ರತಿಭಟನೆಗಳು ನಡೆದ ಬೆನ್ನಲ್ಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ತಪ್ಪಿತಸ್ಥರ ವಿರುದ್ಧ ನೆಟ್ಟಿಗರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪದೇ ಪದೇ ಈ ರೀತಿ ಆಕ್ಷೇಪಾರ್ಹಾ ಗೋಡೆ ಬರಹಗಳ ಮೂಲಕ ಹಿಂದೂಗಳ ಭಾವನೆಗೆ ಯಾಕೆ ಧಕ್ಕೆ ಉಂಟು ಮಾಡಲಾಗುತ್ತಿದೆ ಎಂದು ಹಲವರು ಕಿಡಿಕಾರಿದ್ದಾರೆ. ಇತ್ತೀಚಿಗೆ ನಡೆದ ಚುನಾವಣೆಯ ಬಳಿಕ ಈ ಘಟನೆ ನಡೆದಿದ್ದು, ಸೋಲಿನ ಹತಾಶೆಯಿಂದ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 13 =
Remember me
