ಫಿರೋಜಾಬಾದ್:ಯೇ ದೋಸ್ತಿ ಹಮ್​ ನಹೀ ಛೋಡೆಂಗೆ ಎಂಬ ಹಾಡು ಎಲ್ಲರೂ ಒಮ್ಮೆಯಾದರೂ ಕೇಳಿರಬಹುದು. ಆ ಸಾಲುಗಳಿಗೆ ಅನುಗುಣವಾಗಿ ಬದುಕುವವರ ಕಥೆ ಮುನ್ನೆಲೆಗೆ ಬರುವುದು ಬಹು ವಿರಳ. ಈ ಪ್ರಕರಣದಲ್ಲಿ ಕ್ಯಾನ್ಸರ್ ಪೀಡಿತ ಗೆಳೆಯನ ಸಾವಿನ ನೋವನ್ನು ತಡೆದುಕೊಳ್ಳಲಾಗದೇ ಈ ವ್ಯಕ್ತಿ ಚಿತೆಗೆ ಹಾರಿ ಪ್ರಾಣ ಕಳೆದುಕೊ0ಡಿದ್ದಾರೆ.
ಫೀರೋರಾಬಾದ್​ನ ಯಮುನಾ ನದಿ ದಡದಲ್ಲಿ ತನ್ನ ಸ್ನೇಹಿತನ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಚಿತೆಗೆ ಹಾರಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಆಘಾತಕಾರಿ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗ್ಲಾ ಖಂಗರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಅಶೋಕ್ (42) ಅವರು ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಸಿರ್ಸಗಂಜ್ ವೃತ್ತ ಅಧಿಕಾರಿ (ಸಿಒ) ಪ್ರವೀಣ್ ತಿವಾರಿ ತಿಳಿಸಿದ್ದಾರೆ.
ಅವರ ಅಂತ್ಯಕ್ರಿಯೆಯನ್ನು ಯಮುನಾ ತೀರದಲ್ಲಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆಸಲಾಯಿತು. ಈ ಸಂದರ್ಭ ಅವರ ಸ್ನೇಹಿತ ಆನಂದ್ (40) ಅಲ್ಲಿದ್ದರು. ಜನರು ಸ್ಮಶಾನದಿಂದ ಹೊರಬರಲು ಪ್ರಾರಂಭಿಸಿದಾಗ, ಆನಂದ್ ಇದ್ದಕ್ಕಿದ್ದಂತೆ ಚಿತೆಗೆ ಹಾರಿದರು ಎಂದು ಸಿಒ ಹೇಳಿದರು.
ಅಲ್ಲಿ ನಿಂತಿದ್ದ ಜನರು ಆತನನ್ನು ಚಿತೆಯಿಂದ ಹೊರತೆಗೆದು ಜಿಲ್ಲಾಸ್ಪತ್ರೆಗೆ ಕರೆದೊಯ್ದರು. ಅಲ್ಲಿಂದ ಆಗ್ರಾ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಆದರೆ, ಆನಂದ್ ಆಗ್ರಾಕ್ಕೆ ತೆರಳುವ ಮಾರ್ಗಮಧ್ಯೆ ಮೃತಪಟ್ಟರು. ಆನಂದ್ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
