ಬಿಹಾರ:ದೇಶದಲ್ಲಿ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಅಂಥದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಇದರಲ್ಲಿ ಮದುಮಗನೊಬ್ಬ ಕಲ್ಯಾಣಮಂಟಪದಲ್ಲೇ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾನೆ.
ಇದನ್ನೂ ಓದಿ:ಪತಿ ಹೃದಯಾಘಾತಕ್ಕೆ ಬಲಿ; ಒಂದೇ ಉರುಳಿಗೆ ಮಗನೊಂದಿಗೆ ಕೊರಳೊಡ್ಡಿ ಪ್ರಾಣ ಬಿಟ್ಟ ಪತ್ನಿ
ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಸುರೇಂದ್ರ ಕುಮಾರ್ ಕುಸಿದು ಬಿದ್ದು ಸಾವಿಗೀಡಾದ ವರ. ಬುಧವಾರ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾರ ಬದಲಾಯಿಸುವ ವೇಳೆ ಈತ ಕುಸಿದು ಬಿದ್ದಿದ್ದು, ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಇದನ್ನೂ ಓದಿ:ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!
ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸಾವಿಗೀಡಾಗಿದ್ದ. ಇಬ್ಬರೂ ಪರಸ್ಪರ ಹಾರ ಬದಲಾಯಿಸಿಕೊಂಡು ಇತರ ಶಾಸ್ತ್ರಗಳನ್ನು ಪೂರೈಸಿದ್ದರು. ನಂತರದ ಸಮಾರಂಭದ ವೇಳೆ ಡಿಜೆ ಮ್ಯೂಸಿಕ್​ನ ಭಾರಿ ಸದ್ದಿನಿಂದ ಈತ ತೀವ್ರ ಆಘಾತಕ್ಕೆ ಒಳಗಾಗಿ, ಕುಸಿದು ಬಿದ್ದಿದ್ದ ಎನ್ನಲಾಗಿದೆ.
ಗೃಹ ಸಚಿವರ ಬೆಂಗಾವಲು​ ವಾಹನ ಡಿಕ್ಕಿ, ಬೈಕ್ ಸವಾರ ಸಾವು; ಅಪಘಾತದ ಬಗ್ಗೆ ತಿಳಿದೂ ಹಾಗೇ ಹೋದ್ರಾ ಹೋಂ​ ಮಿನಿಸ್ಟರ್​?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
