ಲಖನೌ:ಡೆಂಗ್ಯೂ ವೈರಸ್​ ಸೊಳ್ಳೆಗಳಿಂದ ಉಂಟಾಗುವ ಖಾಯಿಲೆಯಾಗಿದ್ದು, ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಯನ್ನು ವೈದ್ಯರು ತೀವ್ರ ನಿಗಾದಲ್ಲಿ ಇರಿಸಿ ಚಿಕಿತ್ಸೆ ಕೊಡುವುದನ್ನು ನಾವು ನೋಡಿರುತ್ಥೇವೆ. ಆದರೆ, ವಿಶೇಷ ಪ್ರಕರಣ ಒಂದರಲ್ಲಿ ಡಂಗ್ಯೂದಿಂದ ಬಳಲುತ್ತಿರುವ ವ್ಯಕ್ತಿಯ ಮದುವೆಯನ್ನು ಆಸ್ಪತ್ರೆಯಲ್ಲೇ ನಡೆಸಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್​ನಲ್ಲಿ ಬೆಳಕಿಗೆ ಬಂದಿದೆ.
ಗಾಜಿಯಾಬಾದ್​ನ ಮ್ಯಾಕ್ಸ್​ ವೈಶಾಲಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಮದುವೆಯಾದ ಬಳಿಕ ವರ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಮದುವೆಯ ಸುದ್ದಿ ವೈರಲ್​ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು, ವರ ಅವಿನಾಶ್​ ಕುಮಾರ್​ ತನ್ನ ಮದುವೆಗೆ ನಾಲ್ಕು ದಿನಗಳು ಬಾಕಿ ಇರುವ ಸಮಯದಲ್ಲಿ ಆತನ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಡೆಂಗ್ಯೂನಿಂದ ಬಳಲುತ್ತಿರುವುದು ಬೆಳಕಿಗೆ ಬಂದಿದೆ. ಆತನ ಪ್ಲೇಟ್​ಲೆಟ್​ಗಳು ಸಹ 10 ಸಾವಿರಕ್ಕಿಂತ ಕಡಿಮೆ ಇದ್ದವು ಮತ್ತು ಇದು ಅವರ ಜೀವಕ್ಕೆ ಅಪಾಯವನ್ನುಂಟು ಮಾಡಿತ್ತು.
ಇದನ್ನೂ ಓದಿ:ನಟ ದರ್ಶನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸದ್ದಿಲ್ಲದೆ ಬಿಡುಗಡೆಗೆ ಸಜ್ಜಾದ ಕಾಟೇರ
ಬಳಿಕ ವರ ಅವಿನಾಶ್​ ತಂದೆ ಮದುವೆಯನ್ನು ಮುಂದೂಡಲು ನಿರ್ಧರಿಸಿದ್ದು, ಇದಕ್ಕೆ ವಧುವಿನ ಕಡೆಯವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಗದಿಯಾಗಿರುವ ಮುಹೂರ್ತದಲ್ಲೇ ಮದುವೆ ಮಾಡಬೇಕು ಎಂದು ವಧುವಿನ ಕಡೆಯವರು ಪಟ್ಟು ಹಿಡಿದಿದ್ದು, ಬಳಿಕ ಆಸ್ಪತ್ರೆಯ ಹಾಲ್​ನಲ್ಲಿ ಮದುವೆಯನ್ನು ಸರಳವಾಗಿ ಉಭಯ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿಸಲಾಗಿದೆ.
ವರ ಅವಿನಾಶ್​ ಚಿಕಿತ್ಸೆ ಪಡೆಯುತ್ತಿದ್ದು, ಸಂಪೂರ್ಣವಾಗಿ ಗುಣಮುಖರಾದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗುವುದು ಮತ್ತು ನವದಂಪತಿಗಳಿಗೆ ಮತ್ತೊಮ್ಮೆ ಸಿಬ್ಬಂದಿ ವತಿಯಿಂದ ಶುಭ ಹಾರೈಸಲಾಗುವುದು ಎಂದು ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four − 4 =
Remember me
