ನವದೆಹಲಿ:ಮದುವೆ ಶಾಸ್ತ್ರೋಕ್ತವಾಗಿ ಗುರುತಿಸಲ್ಪಟ್ಟ ಸಂಗಾತಿಗಳ ನಡುವಿನ ಒಪ್ಪಂದ ಎಂದೇ ಹೇಳಬಹುದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮುದವೆಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋ ಆಗಿಂದಾಗೆ ವೈರಲ್​ ಆಗುತ್ತಿರುತ್ತವೆ. ಕೆಲವೊಮ್ಮೆ ಹಾಸ್ಯಾಸ್ಪದ ವಿಡಿಯೋಗಳು ವೈರಲ್​ ಆದೆರೆ ಮತ್ತೊಮ್ಮೆ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ.
ಇದೀಗ ಮದುವೆ ಸಮಾರಂಭದ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕುಡಿದ ಮತ್ತಿನಲ್ಲಿ ವರನೊಬ್ಬ ವಧುವಿಗೆ ಹಾರ ಹಾಕುವ ಬದಲು ಬೇರೊಬ್ಬರಿಗೆ ಹಾಕಿದ್ದಾನೆ. ನಂತರ ಅಲ್ಲಿ ಬೇರೆಯದ್ದೇ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈವರೆಗೂ 5 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದೆ.
Pepsi given by friends can be dangerous to health.🤣🤣🤣🤣🤣🤣🤣🤣🤣pic.twitter.com/9VUmikJa0F
ಇದನ್ನೂ ಓದಿ:ದಟ್ಟ ಮಂಜಿನಿಂದಾಗಿ ಸರಣಿ ಅಪಘಾತ; ಕೋಳಿಗಳಿಗೆ ಮುಗಿಬಿದ್ದ ಜನ
ವೈರಲ್​ ಆಗಿರುವ ವಿಡಿಯೋದಲ್ಲಿ ವರ ಕುಡಿದ ನಶೆಯಲ್ಲಿ ವಧುವಿಗೆ ಹಾರ ಹಾಕುವ ಬದಲು ಆಕೆಯ ಪಕ್ಕದಲ್ಲಿರುವ ಸಂಬಂಧಿ ಒಬ್ಬರಿಗೆ ಹಾಕುತ್ತಾನೆ. ಇದನ್ನು ಕಂಡು ಸಿಟ್ಟಿಗೆದ್ದ ಮಹಿಳೆ ಆತನಿಗೆ ಕಪಾಳಮೋಕ್ಷ ಮಾಡಿ ಬೈಯುತ್ತಿರುವುದನ್ನು ನೋಡಬಹುದಾಗಿದೆ. ಇದಾದ ಕೆಲ ಹೊತ್ತಿನ ಬಳಿಕ ಮಾತನಾಡಿರುವ ವರ ನನ್ನ ಸ್ನೇಹಿತರು ಪೆಪ್ಸಿ ಎಂದು ಮದ್ಯ ನೀಡಿದ್ದಾರೆ. ನಾನು ತಿಳಿಯದೆ ಕುಡಿದಿದ್ದರಿಂದ ಈ ಅವಾಂತರ ನಡೆದಿದೆ. ಆದ್ದರಿಂದ ನಾನು ನಿಮ್ಮಲ್ಲಿ ಕ್ಷಮೆ ಕೇಳುತ್ತಿದ್ದೇನೆ ಎಂದು ಹೇಳುತ್ತಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸ್ನೇಹಿತರು ನೀಡುವ ಪೆಪ್ಸಿ ಆರೋಗ್ಯಕ್ಕೆ ಅಪಾಯಕಾರಿ ಎಂದು ಹಲವರು ಕಮೆಂಟ್​ ಮಾಡಿದ್ದಾರೆ. ಇನ್ನು ಕೆಲವರು ಇದು ಪ್ರಚಾರದ ಗೀಳಿಗಾಗಿ ಮಾಡಿರುವ ವಿಡಿಯೋ ಎಂದು ಕಮೆಂಟ್​ ಮಾಡಿದ್ದಾರೆ.

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 × 1 =
Remember me
