ಮುಂಬೈ:ಗ್ರೂಮಿಂಗ್​ಗಾಗಿ ಬಿಡಲಾಗಿದ್ದ ಶ್ವಾನದ ಮೇಲೆ ಪೆಟ್​ ಕ್ಲಿನಿಕ್​ನ ಸಿಬ್ಬಮದಿ ಅಂಆನುಷವಾಗಿ ಹಲ್ಲೆ ನಡೆಸಿ ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಥಾಣೆಯ ಆರ್​ ಮಾಲ್​ ಬಳಿ ಇರುವ ವೆಟಿಕ್​ ಪೆಟ್​ ಕ್ಲಿನಿಕ್​ ಬಳಿ ಈ ಘಟನೆ ನಡೆದಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ವೆಟಿಕ್​ ಪೆಟ್​ ಕ್ಲಿನಿಕ್​ನ ಸಿಬ್ಬಂದಿ ನಾಯಿಯನ್ನು ಮನಸೋಇಚ್ಛೆ ಥಳಿಸುತ್ತಿರುವುದನ್ನು ನೋಡಬಹುದಾಗಿದೆ. ಇದನ್ನು ಮೊಬೈಲ್​ನಲ್ಲಿ ಸೆರೆಹಿಡಿಯುತ್ತಿರುವ ಮತ್ತೋರ್ವ ಸಿಬ್ಬಂದಿ ಆತನಿಗೆ ಮತ್ತಷ್ಟು ಪ್ರೋತ್ಸಾಹ ನೀಡವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಮತೆ ಬಾಲಿವುಡ್​ನ ಸೆಲೆಬ್ರಿಟಿಗಳು ಹಾಗೂ ಪ್ರಾಣಿಪ್ರಿಯರು ಆಕ್ರೋಶವನ್ನು ಹೊರಹಾಕಿದ್ದರು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.
#Thane: Video of a groomer from#VeticPetCliniclocated in R Mall in Thane has been arrested after video of him beating a dog went viral on SM.The dog groomer can be seen punching the dog and another man was recording the video. Both have been arrested by Mumbai police.The…pic.twitter.com/MNKx4VwzvV
ಇದನ್ನೂ ಓದಿ:ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ ಲಾಲ್​​ ಬಹದ್ದೂರ್​ ಶಾಸ್ತ್ರಿ ಮೊಮ್ಮಗ
ಇತ್ತ ವೈರಲ್​ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ವೆಟಿಕ್​ ಪೆಟ್​​ ಕ್ಲಿನಿಕ್​ನ ವಕ್ತಾರ, ವಿಚಾರ ತಿಳಿಯುತ್ತಿದ್ದಂತೆ ಇಬ್ಬರು ಸಿಬ್ಬಂದಿಯನ್ನು ವಜಾಗೊಳಿಸಲಾಗಿದ್ದು, ಹೀನಾಯ ಕೃತ್ಯವನ್ನು ಕಂಡು ನಮಗೆ ಆಘಾತ ಉಂಟಾಗಿದ್ದು, ಕ್ಷಮೆಯಾಚಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಆಗದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿಡಿಯೋ ವೈರಲ್​ ಆಗುತ್ತಿದ್ದಂತೆ ಸ್ವಯಂ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಮಹಾರಾಷ್ಟ್ರದ ವಿವಿಧೆಡೆ ಪ್ರಾಣಿಪ್ರಿಯರು ದೂರು ದಾಖಲಿಸಿದ್ದು, ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಪ್ರಾಣಿಪ್ರಿಯರು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 2 =
Remember me
