ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಮಂಡಳಿಯ ಸಭೆ ಜೂನ್ 22 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿದೆ.
ಇದನ್ನೂ ಓದಿ:ಜಿ7 ಶೃಂಗಸಭೆಗಾಗಿ ಭಾರತದಿಂದ ಇಟಲಿನತ್ತ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ
ಕೌನ್ಸಿಲ್‌ನ ಸಭೆಯು ಅಕ್ಟೋಬರ್ 2023 ರಲ್ಲಿ ಅವರ ಕೊನೆಯ ಸಭೆಯ ನಂತರ ಇದು ಮೊದಲ ಸಭೆಯಾಗಿದೆ. ಜಿಎಸ್‌ಟಿ ಕೌನ್ಸಿಲ್‌ನ 53 ನೇ ಸಭೆಯು ಇದೇ 22 ರಂದು ನವದೆಹಲಿಯಲ್ಲಿ ನಡೆಯಲಿದೆ ಎಂದು ಜಿಎಸ್‌ಟಿ ಕೌನ್ಸಿಲ್‌ನ ಅಧಿಕೃತ ಎಕ್ಸ್ ಖಾತೆಯಲ್ಲಿ ಗುರುವಾರ ತಿಳಿಸಲಾಗಿದೆ.
ಕೌನ್ಸಿಲ್ ಸಭೆಯ ಅಜೆಂಡಾ ಇನ್ನು ಸಾರ್ವಜನಿಕರ ವೇದಿಕೆಯಾಗಿಲ್ಲ ಮತ್ತು ರೂಢಿಯಂತೆ ಕೇಂದ್ರ ಹಣಕಾಸು ಸಚಿವರು 53 ನೇ ಸರಕು ಮತ್ತು ಸೇವಾ ತೆರಿಗೆ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸುತ್ತಾರೆ, ಅಲ್ಲದೆ ಸಭೆಯಲ್ಲಿ ರಾಜ್ಯಗಳ ಹಣಕಾಸು ಮಂತ್ರಿಗಳು, ಇತರರು ಭಾಗವಹಿಸುತ್ತಾರೆ.
ತೆರಿಗೆ ದರಗಳು, ನೀತಿ ಬದಲಾವಣೆಗಳು ಮತ್ತು ಆಡಳಿತಾತ್ಮಕ ಸಮಸ್ಯೆಗಳು ಸೇರಿದಂತೆ ಜಿಎಸ್​ಟಿ ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಜಿಎಸ್​ಟಿ ಕೌನ್ಸಿಲ್​ ನಿಯತಕಾಲಿಕವಾಗಿ ಸಭೆ ಸೇರುತ್ತದೆ.
ಕೌನ್ಸಿಲ್​ ಭಾರತದ ಪರೋಕ್ಷ ತೆರಿಗೆ ರಚನೆಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ರಾಷ್ಟ್ರದ ಆರ್ಥಿಕಕ ಗುರಿಗಳೊಂದಿಗೆ ಹೊಂದಿಕೆಯಾಗುತ್ತದೆ ಮತ್ತು ನಾಗರಿಕರು ಮತ್ತು ವ್ಯವಹಾರಗಳ ಮೇಲಿನ ತೆರಿಗೆ ಹೊರೆಯನ್ನು ಸರಾಗಗೊಳಿಸುತ್ತದೆ.
ಸಿಕ್ಕಿಂ: ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಸಿಎಂ ಪತ್ನಿ ಶಾಸಕ ಸ್ಥಾನಕ್ಕೆ ರಾಜೀನಾಮೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
