ನವದೆಹಲಿ:ಕೋವಿಡ್​-19 ಲಾಕ್​ಡೌನ್​ನಿಂದಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಬೊಕ್ಕಸಗಳಿಗೆ ಭಾರಿ ನಷ್ಟವಾಗುತ್ತಿದೆ. ಅಲ್ಲದೆ, ಕೋವಿಡ್​-19 ಲಾಕ್​ಡೌನ್​ನಿಂದ ಸಂಕಷ್ಟದಲ್ಲಿರುವ ಎಲ್ಲ ವರ್ಗಗಳಿಗೂ ಸಹಾಯ ಮಾಡಲು ಸರ್ಕಾರಗಳು ಆರ್ಥಿಕ ಪ್ಯಾಕೇಜ್​ಗಳನ್ನು ಘೋಷಿಸುತ್ತಿವೆ. ಇವೆಲ್ಲವೂ ಬಜೆಟೇತರ ವೆಚ್ಚವಾಗಿದ್ದು, ಇದಕ್ಕೆ ಅಗತ್ಯ ಆರ್ಥಿಕ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಕೇಂದ್ರ ಸರ್ಕಾರ ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್​ಟಿ) ಹೆಚ್ಚಿಸುವ ಸಾಧ್ಯತೆ ಇರುವುದಾಗಿ ಹೇಳಲಾಗುತ್ತಿದೆ.
ಆದರೆ, ಇದನ್ನು ಅಲ್ಲಗಳೆದಿರುವ ಕೇಂದ್ರ ವಿತ್ತ ಸಚಿವಾಲಯ, ಲಾಕ್​ಡೌನ್​ನಿಂದ ಸಂಕಷ್ಟದಲ್ಲಿರುವ ವಾಣಿಜ್ಯೋದ್ಯಮ ಸೇರಿ ಎಲ್ಲ ವರ್ಗದವರಿಗೂ ಅನುಕೂಲ ಮಾಡಿಕೊಡಲು ಸರ್ಕಾರ ಪ್ರಯತ್ನಮುಖಿಯಾಗಿದೆ. ಇಂಥ ಸಂದರ್ಭದಲ್ಲಿ ಜಿಎಸ್​ಟಿ ಹೆಚ್ಚಿಸುವುದು ವಿರೋಧಭಾಸವೆನಿಸಿಕೊಳ್ಳುತ್ತದೆ. ಹಾಗಾಗಿ ಇಂಥ ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.
ಇದನ್ನೂ ಓದಿ:ಸೋಮವಾರದಿಂದ ದೇಶೀಯ ವಿಮಾನಯಾನ ಆರಂಭವಾಗುವುದು ಅನುಮಾನ
ಕರೊನಾ ಪಿಡುಗಿನ ಸಂದರ್ಭದಲ್ಲಿ ಯಾವುದೇ ಮೇಲ್ತರಿಗೆ ವಿಧಿಸುವುದು ಅಥವಾ ತೆರಿಗೆ ಹೆಚ್ಚಿಸುವುದು ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗುತ್ತದೆ. ಅಲ್ಲದೆ, ರಾಷ್ಟ್ರದಲ್ಲಿ ಆರ್ಥಿಕ ಪುನ್ಶೇತನಕ್ಕಾಗಿ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳಿಗೆ ಹಿನ್ನಡೆಯಾಗುತ್ತದೆ ಎಂದು ಕೇಂದ್ರ ಸರ್ಕಾರದ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಲಾಕ್​ಡೌನ್​ ಅವಧಿಯಲ್ಲಿ ಮಾರಾಟ ತುಂಬಾ ಕಡಿಮೆಯಾಗಿದೆ. ಅಲ್ಲದೆ, ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದ ಕಾರಣ ಉತ್ಪಾದನಾ ವಲಯವೂ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಭವಿಷ್ಯದಲ್ಲಿ ಈ ವಲಯಕ್ಕೆ ಕಾರ್ಮಿಕರ ಕೊರತೆಯೂ ಉಂಟಾಗುವ ಸಾಧ್ಯತೆ ಇಲ್ಲದಿಲ್ಲ. ಹಾಗಾಗಿ, ತೆರಿಗೆ ಹೆಚ್ಚಿಸುವುದು ಇಲ್ಲವೇ ಮೇಲ್ತೆರಿಗೆ ವಿಧಿಸುವುದು ಸರಿಯಲ್ಲ. ಹಾಗೆ ಮಾಡುವುದರಿಂದ ಗ್ರಾಹಕರ ಮನಸ್ಸಿನ ಮೇಲೆ ಗಾಢ ಪರಿಣಾಮ ಉಂಟಾಗುವ ಅಪಾಯವಿದೆ. ಇದರಿಂದ ಪುನ್ಶೇತನದ ಹಾದಿಯಲ್ಲಿ ಉತ್ಪಾದನಾ ವಲಯ ಹಾಗೂ ಮಾರಾಟಗಾರರಿಗೆ ಎಡರುತೊಡರು ಎದುರಾಗುವ ಸಾಧ್ಯತೆ ಇದೆ ವಿವರಿಸಿದ್ದಾರೆ.
ಕೇರಳದಲ್ಲಿ ಮತ್ತೊಂದು ಸೆಕ್ಸ್ ಹಗರಣ: ಮಹಿಳೆ ಜತೆ ಸಿಕ್ಕಿಬಿದ್ದ ಫಾದರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 9 =
Remember me
