ನವದೆಹಲಿ:ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಬರಬೇಕಿರುವ ಜಿಎಸ್​ಟಿ ಪರಿಹಾರ ಮೊತ್ತದ ಪೈಕಿ ಎರಡನೇ ಕಂತು ಇಂದು ಬಿಡುಗಡೆ ಆಗಲಿದೆ. ಇಂಥದ್ದೊಂದು ಭರವಸೆ ಸೋಮವಾರ ಕೇಂದ್ರದ ಕಡೆಯಿಂದ ವ್ಯಕ್ತವಾಗಿದೆ.
ಕರ್ನಾಟಕ ಸೇರಿ ಒಟ್ಟು 16 ರಾಜ್ಯಗಳಿಗೆ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್​ಟಿ ಪರಿಹಾರ ಮೊತ್ತದ ಬಾಕಿ ಬಾಬ್ತು ಎರಡನೇ ಕಂತಿನಲ್ಲಿ ಒಟ್ಟು 6 ಸಾವಿರ ಕೋಟಿ ರೂ. ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಬಿಹಾರ್​, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಮೇಘಾಲಯ, ಒಡಿಶಾ, ತಮಿಳುನಾಡು, ತ್ರಿಪುರ, ಉತ್ತರಪ್ರದೇಶ, ಉತ್ತರಾಖಂಡ, ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಪುದುಚೇರಿಗಳಿಗೆ ಈ ಹಣ ರವಾನೆ ಆಗಲಿದೆ. ಜಿಎಸ್​​ಟಿ ಪರಿಹಾರ ಮೊತ್ತದ ಮೊದಲ ಕಂತನ್ನು ಅಕ್ಟೋಬರ್ 24ರಂದು ಬಿಡುಗಡೆ ಮಾಡಿತ್ತು. (ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + 18 =
Remember me
