ಕರೊನಾ ಬಿಕ್ಕಟ್ಟಿನಹಿನ್ನೆಲೆಯಲ್ಲಿ ಆನ್​ಲೈನ್ ಮೂಲಕ ನಡೆಸಲಾಗುತ್ತಿರುವ ಶಾಲಾ-ಕಾಲೇಜು ತರಗತಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಚ್​ಆರ್​ಡಿ) ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ತರಗತಿಗಳಿಗೆ ಸಮಯ ಮಿತಿ ನಿಗದಿಪಡಿಸಿದೆದೆ.
ಪೂರ್ವ ಪ್ರಾಥಮಿಕ ಮಟ್ಟದ ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿಗಳು 30 ನಿಮಿಷಗಳಿಗಿಂತ ಹೆಚ್ಚು ಇರಬಾರದು ಎಂದು ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ. ಜತೆಗೆ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 45 ನಿಮಿಷದ ಎರಡು ಆನ್​ಲೈನ್ ಸೆಷನ್​ಗಳನ್ನು ನಡೆಸಬೇಕು. 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ 30 ರಿಂದ 45 ನಿಮಿಷದ ನಾಲ್ಕು ಸೆಷನ್​ಗಳ್ನು ನಡೆಸಬೇಕು ಎಂದು ಹೇಳಿದ್ದಾರೆ.
ಕರೊನಾ ಬಿಕ್ಕಟ್ಟಿನಿಂದಾಗಿ ಶಾಲಾ-ಕಾಲೇಜುಗಳು ಮುಚ್ಚಿರುವುದರಿಂದಾಗಿ ಸುಮಾರು 24 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಆದಾಗ್ಯೂ ಮನೆಯಲ್ಲಿ ಆರೋಗ್ಯಕರ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ಮುಂದುವರಿಸಬೇಕಾಗಿದೆ ಎಂದು ಅವರು ತಿಳಿಸಿದರು. ಲಾಕ್​ಡೌನ್​ನಿಂದಾಗಿ ಪ್ರಸ್ತುತ ಮನೆಯಲ್ಲಿರುವ ವಿದ್ಯಾರ್ಥಿಗಳಿಗಾಗಿ ನೆರವಾಗಲು ಆನ್​ಲೈನ್ ಶಿಕ್ಷಣದ ಮೇಲೆ ಕೇಂದ್ರೀಕರಿಸುವ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಶಾಲಾ ಮುಖ್ಯಸ್ಥರು, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಈ ಮಾರ್ಗಸೂಚಿಗಳು ಉಪಯುಕ್ತವಾಗುತ್ತವೆ ಎಂದು ಪೋಖ್ರಿಯಾಲ್ ಹೇಳಿದ್ದಾರೆ.
ಆನ್​ಲೈನ್ ತರಗತಿ ನಡೆಸುವಾಗ ಅವಧಿ, ಆನ್​ಲೈನ್ ಮತ್ತು ಆಫ್​ಲೈನ್ ಚಟುವಟಿಕೆಗಳ ಬಗ್ಗೆ ಸರಿಯಾದ ಯೋಜನೆ ಇರಬೇಕು. ತರಗತಿ ಸಮಯದಲ್ಲಿ ದೈಹಿಕ, ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸಬೇಕು. ಮಕ್ಕಳಿಗೆ ಅತೀಯಾದ ಒತ್ತಡ, ಕಣ್ಣಿನ ಸಮಸ್ಯೆಗಳು ಹಾಗೂ ದೈಹಿಕ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು ಎಂದು ಸಚಿವಾಲಯ ತಿಳಿಸಿದೆ.
ದ್ವಿತೀಯ ಪಿಯು ಪೂರಕ ಪರೀಕ್ಷೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 8 =
Remember me
