ನವದೆಹಲಿ:ಕೋವಿಡ್ 19 ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಶೈಕ್ಷಣಿಕ ವರ್ಷದ ಕಾಲೇಜು ತರಗತಿ ನವೆಂಬರ್ 1ರಿಂದ ಶುರುವಾಗಲಿದೆ. ಈ ಸಂಬಂಧ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ಪ್ರಸ್ತಾವಿತ ಮಾರ್ಗಸೂಚಿ ಪ್ರಕಟಿಸಿದೆ. ಇದರಂತೆ, ಅಕ್ಟೋಬರ್ 31ರ ಒಳಗೆ ಪ್ರಥಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ತರಗತಿಗಳ ಅಡ್ಮಿಷನ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ನವೆಂಬರ್ 1ರಿಂದ ಕಾಲೇಜು ತರಗತಿಗಳು ಪ್ರಾರಂಭವಾಗಲಿದ್ದು, ಮೊದಲ ಸೆಮಿಸ್ಟರ್ ಪರೀಕ್ಷೆಗಳು ಮಾರ್ಚ್ 8 ರಿಂದ 23ರ ನಡುವೆ ನಡೆಯಲಿದೆ. ಎರಡನೇ ಸೆಮಿಸ್ಟರ್ ಏಪ್ರಿಲ್ 5ರಿಂದ ಆರಂಭವಾಗಲಿದ್ದು, ಪರೀಕ್ಷೆಗಳು ಆಗಸ್ಟ್​ನಲ್ಲಿ ನಡೆಯಲಿವೆ. ಹಾಗೆ, ಮೊದಲ ವರ್ಷದ ಕೋರ್ಸ್ ಆಗಸ್ಟ್ 30ಕ್ಕೆ ಪೂರ್ಣಗೊಳ್ಳಲಿದೆ.
ಇದನ್ನೂ ಓದಿ:ನಿಮ್ಮ ವಸ್ತುಗಳು ಕಳೆದುಹೋಗಿವ್ಯಾ? ಇನ್ಮುಂದೆ ಮನೆಯಲ್ಲೇ ಕೂತು ಕಂಪ್ಲೇಟ್​ ಕೊಡ್ಬೋದು!
ಇದೇ ವೇಳೆ, ಕರೊನಾ ಕಾರಣಕ್ಕೆ ಹಣಕಾಸು ತೊಂದರೆ ಅನುಭವಿಸುತ್ತಿರುವ ಪಾಲಕರ ಅನುಕೂಲಕ್ಕಾಗಿ, ಅವರೇನಾದರೂ ವಿದ್ಯಾರ್ಥಿಗಳ ಅಡ್ಮಿಷನ್ ಕ್ಯಾನ್ಸಲ್ ಮಾಡಿದರೆ ಅಥವಾ ಬೇರೆ ಕಾಲೇಜುಗಳಿಗೆ ಪ್ರವೇಶ ಬಯಸಿದರೆ, ಅವರು ಕಟ್ಟಿರುವ ಪೂರ್ಣಶುಲ್ಕವನ್ನು ಕಾಲೇಜು ಆಡಳಿತ ಮಂಡಳಿ ಹಿಂದಿರುಗಿಸಬೇಕು. ಆದರೆ, ಈ ವಿನಾಯಿತಿ ನವೆಂಬರ್ 30ರ ತನಕ ಮಾತ್ರ ಲಭ್ಯ ಎಂದು ಮಾರ್ಗಸೂಚಿ ತಿಳಿಸಿದೆ. ಇದನ್ನು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಂಕ್ ಅವರು ಟ್ವೀಟ್ ಮಾಡಿದ್ದಾರೆ.
In view of the COVID-19 pandemic, the Commission has accepted the Report of the Committee and approved the@ugc_indiaGuidelines on Academic Calendar for the First Year of Under-Graduate and Post-Graduate Students of the Universities for the Session 2020-21.
Suggested calendar👇pic.twitter.com/JPYNhiWb0k
— Dr. Ramesh Pokhriyal Nishank (@DrRPNishank)September 22, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − nine =
Remember me
