ಗುಜರಾತ್:19 ವರ್ಷದ ಯುವಕನೊಬ್ಬ ಗರ್ಬಾ ಡ್ಯಾನ್ಸ್ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಗುಜರಾತ್ ರಾಜ್ಯದ ಜಾಮ್ ನಗರದಲ್ಲಿ ಬೆಳಕಿಗೆ ಬಂದಿದೆ.
ವಿನೀತ್ ಮೆಹುಲ್‌ಭಾಯ್(19) ಮೃತ ಬಾಲಕ.  ಗುಜರಾತ್‌ನ ಜಾಮ್‌ನಗರದ ನಿವಾಸಿಯಾಗಿರುವ ವಿನೀತ್ ಮೆಹುಲ್‌ಭಾಯ್ ಕುನ್ವಾರಿಯಾ ಗಾರ್ಬಾ ನೃತ್ಯ ಅಭ್ಯಾಸ ಮಾಡುವಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಜುನಾಗಢ ನಿವಾಸಿಗಳು ಕಳೆದ 10 ವರ್ಷಗಳಿಂದ ನವರಾತ್ರಿಯ ಸಂದರ್ಭದಲ್ಲಿ ಗರ್ಬಾ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ.ಈ ವರ್ಷವೂ ಸ್ಪರ್ಧೆಯಲ್ಲಿ ಗೆಲ್ಲುವ ತಯಾರಿಯಲ್ಲಿದ್ದಾಗ ಯುವಕ  ಏಕಾಏಕಿ ಕುಸಿದು ಬಿದ್ದಿದ್ದಾನೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗರ್ಬಾ ಡ್ಯಾನ್ಸ್ ಮಾಡುವಾಗ ವಿನೀತ್ ಕೆಳಗೆ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯೂ ಬಂದಿತ್ತು.ಹೃದಯಾಘಾತದಿಂದ ವಿನೀತ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಕೆಲವು ತಿಂಗಳ ಹಿಂದೆ, ಜಾಮ್‌ನಗರದ 41 ವರ್ಷದ ಹೃದ್ರೋಗ ವೈದ್ಯರೊಬ್ಬರು ತಮ್ಮದೇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.ಗುಜರಾತ್‌ನ ಹಲವು ಭಾಗಗಳಲ್ಲಿ ಜಿಮ್‌ಗಳು, ಕ್ರಿಕೆಟ್ ಮೈದಾನಗಳು ಮತ್ತು ಶಾಲೆಗಳಲ್ಲಿ ಹೃದಯಾಘಾತದಿಂದ ಸಾವುಗಳು ಸಂಭವಿಸುತ್ತಿವೆ.
ಕಾಮುಕರ ಅಟ್ಟಹಾಸ: ಅರೆಬೆತ್ತಲಾಗಿ ರಕ್ತಸ್ರಾವದೊಂದಿಗೆ ಬೀದಿಯಲ್ಲಿ ಅಲೆದಾಡಿದ ಬಾಲಕಿ, ನೆರವಿಗೆ ಬಾರದ ಜನರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + seven =
Remember me
