ನವದೆಹಲಿ:ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಅರಿಕಾರದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡ ಸಂಭ್ರಮದಲ್ಲಿದ್ದ ಆಮ್​ ಆದ್ಮಿ ಪಕ್ಷ, ಮರುದಿನವೇ ಆಘಾತ ಸಂಭವಿಸಿದೆ. ದೆಹಲಿ ಪಾಲಿಕೆಯಲ್ಲಿ ಬಿಜೆಪಿಯ ಸತತ 15 ವರ್ಷಗಳ ಆಡಳಿತಕ್ಕೆ ಅಂತ್ಯ ಹಾಡಿದ ಎಎಪಿ, ಹಿಮಾಚಲ ಪ್ರದೇಶ ಮತ್ತು ಗುಜರಾತ್​ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೂ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿತ್ತು. ಇಂದು ಈ ಎರಡೂ ರಾಜ್ಯಗಳ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಸದ್ಯ ಎರಡೂ ರಾಜ್ಯಗಳಲ್ಲಿ ಎಎಪಿ ಎರಡಂಕಿ ಗೆಲುವು ದಾಟಿಲ್ಲ.
ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ಮೇಲಿನ ಭ್ರಷ್ಟಾಚಾರ ಪ್ರಕರಣ, ಆಪ್​ ನಾಯಕರೊಬ್ಬರು ಟಿಕೆಟ್​ಗಾಗಿ ಹಣ ಪಡೆಯುತ್ತಿದ್ದ ವಿಡಿಯೋ ವೈರಲ್​ ಆಗಿದ್ದು, ಮದ್ಯದ ಹಗರಣದ ಆರೋಪ ಸೇರಿ ಹಲವು ಸವಾಲುಗಳನ್ನೆದುರಿಸಿದ ಆಮ್​ ಆದ್ಮಿ ಪಾರ್ಟಿ, ಬಿಜೆಪಿಯ ದಿಗ್ಗಜ ನಾಯಕರ ಪ್ರಚಾರಗಳ ಮಧ್ಯೆಯೂ ಅರವಿಂದ ಕೇಜ್ರಿವಾಲ್​ ನೇತೃತ್ವದ ಆಪ್​ 250 ವಾರ್ಡ್​ಗಳಲ್ಲಿ 134ನ್ನು ತನ್ನದಾಗಿಸಿಕೊಳ್ಳುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಈ ಬೆಳವಣಿಗೆಯೂ ಹಿಮಾಚಲ ಪ್ರದೇಶ ಮತ್ತು ಗುಜರಾತ್​ ಚುನಾವಣಾ ಫಲಿತಾಂಶದತ್ತ ಮತ್ತಷ್ಟು ಕುತೂಹಲ ಮೂಡಿಸಿತ್ತು. ಈ ರಾಜ್ಯಗಳ ಪೈಕಿ ಒಂದರಲ್ಲಾದರೂ ಆಪ್​ ಜಯಬೇರಿ ಬಾರಿಸಬಹುದು ಅಥವಾ​ ಬಿಜೆಪಿಗೆ ಭಾರೀ ಪೈಪೋಟಿ ನೀಡಬಹುದು ಎಂದೇ ಚರ್ಚಿಸಲಾಗಿತ್ತು.
ಆದರೆ ಗುಜರಾತ್​ನಲ್ಲಿ ಎಂದಿನಂತೆ ಬಿಜೆಪಿ ಮ್ಯಾಜಿಕ್​ ನಂಬರ್​ ದಾಟಿ ಭರ್ಜರಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.
ಗುಜರಾತಲ್ಲಿ ಮತ್ತೆ ಬಿಜೆಪಿ ಜಯಭೇರಿ; ಹಿಮಾಚಲದಲ್ಲೂ ಕಮಲ: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗ

ಚುನಾವಣಾ ಫಲಿತಾಂಶ: ಗುಜರಾತ್​ನಲ್ಲಿ BJP ಭರ್ಜರಿ ಮುನ್ನಡೆ, ಹಿ. ಪ್ರದೇಶದಲ್ಲಿ ಕಾಂಗ್ರೆಸ್​ನಿಂದ ಟಫ್​ ಫೈಟ್​, AAPಗೆ ನಿರಾಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
