ಸಾವರ್ಕುಂಡ್ಲಾ:ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ(69) ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಗುಜರಾತ್‌ನ ಮಾ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ ಪಟ್ಟಣದ ಬಳಿ ಈ ಘಟನೆ ನಡೆದಿದ್ದು, ಗುರುವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು.
ಘಟನೆ ಹಿನ್ನೆಲೆ:
ಮಾಜಿ ಸಚಿವರು ಗುರುವಾರ ರಾತ್ರಿ ಸಾವರ್ಕುಂಡ್ಲಾಗೆ ಹಿಂತಿರುಗುತ್ತಿದ್ದರು. ಈ ವೇಳೆ ವಂಡಾ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ 8.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ವಘಾಸಿಯಾ ಚಲಾಯಿಸುತ್ತಿದ್ದ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸಹಿತ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಜತೆಗೆ ಮಾಜಿ ಸಚಿವರ ವಾಹನದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ ಎಂದು ಪೊಲೀಸ್ ತಿಳಿಸಿದ್ದಾರೆ.
ಇದನ್ನೂ ಓದಿ:ಶಿಕ್ಷಣ ಪಡೆದು ಬದುಕು ರೂಪಿಸಿಕೊಳ್ಳಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಕಿವಿಮಾತು
ವಘಾಸಿಯಾ, ಸಾವರ್ಕುಂಡ್ಲಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಶಾಸಕರಾಗಿದ್ದರು. ವಿಜಯ್ ರೂಪಾನಿ ಸರ್ಕಾರದ ಮೊದಲ ಅವಧಿಯಲ್ಲಿ ಕೃಷಿ ಮತ್ತು ನಗರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
