ಗಾಂಧಿನಗರ:ಗುಜರಾತ್​ನ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಮನ್ಸುಖ್ ವಾಸವಾ ಮಂಗಳವಾರದಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೇಂದ್ರದ ಬಜೆಟ್​ ಸಮಯದಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಪಂಜಾಬ್​ನಲ್ಲಿ 1,561 ಮೊಬೈಲ್​ ಟವರ್​ಗಳನ್ನು ಹಾಳುಗೆಡವಿದ ರೈತ ಹೋರಾಟಗಾರರು; ಕಠಿಣ ಕ್ರಮಕ್ಕೆ ಮುಂದಾದ ಸಿಎಂ
ನಾನು ಇಷ್ಟು ದಿನ ಪಕ್ಷಕ್ಕೆ ನಿಷ್ಠೆಯಿಂದ ದುಡಿದಿದ್ದೇನೆ. ನಾನು ನಿಭಾಯಿಸಬಲ್ಲದಕ್ಕಿಂತ ಹೆಚ್ಚಿನದನ್ನು ಬಿಜೆಪಿ ನನಗೆ ನೀಡಿದೆ. ಇದಕ್ಕಾಗಿ ನಾನು ಪಕ್ಷ ಮತ್ತು ಪಕ್ಷದ ಕೇಂದ್ರ ಮುಖಂಡರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ತಪ್ಪುಗಳಿಂದಾಗಿ ಪಕ್ಷಕ್ಕೆ ಕೆಟ್ಟ ಹೆಸರು ಬರಬಾರದು ಎಂದು ಈಗ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ. ನರ್ಮದಾ ಜಿಲ್ಲೆಯ 121 ಗ್ರಾಮಗಳನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಕೋರಿ ವಾಸವಾ ಅವರು ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ಇದನ್ನೂ ಓದಿ:ಸೌತ್​ ನಿರ್ಮಾಪಕರ ಸಿನಿಮಾದಲ್ಲಿ ಯಶ್​?; ಜನವರಿ 8ರ ಬರ್ತ್​ಡೇಗೆ ಅಚ್ಚರಿಯ ಮಾಹಿತಿ
ಮನ್ಸುಖ್​ ಅವರು ಗುಜರಾತ್​ನ ಭರೂಚ್​ ಕ್ಷೇತ್ರದಿಂದ ಆರು ಬಾರಿ ಕೇಂದ್ರಕ್ಕೆ ಆಯ್ಕೆಯಾಗಿದ್ದರು. ಅವರು 2014ರಿಂದ 2016ರವರೆಗೆ ಕೇಂದ್ರದ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. (ಏಜೆನ್ಸೀಸ್​)
ಸರ್ಪೈಸ್​ ನೀಡಲು ಮನೆಗೆ ಬಂದ ಗಂಡನಿಗೆ ಕಾದಿತ್ತು ಬಿಗ್​ ಶಾಕ್​! ಹೆಂಡತಿಯ ಇನ್ನೊಂದು ರೂಪ ನೋಡಿದ ಗಂಡ ಮಾಡಿದ್ದೇನು?

ಡಾಕ್ಟರ್​ ಕನಸು ಕಟ್ಟಿದ್ದ ಯುವತಿ ಆತ್ಮಹತ್ಯೆ; ಶೇ. 96 ಅಂಕ ತೆಗೆದರೂ ಸಿಗಲಿಲ್ಲ ಸರ್ಕಾರಿ ಸೀಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
