ಗುಜರಾತ್​:ಗುಜರಾತ್ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ಗುಜರಾತ್‌ನ ಅರಾವಳಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರ ವರ್ತನೆ ಬಗ್ಗೆ ಟೀಕೆಗಳು ಬರುತ್ತಿವೆ. ಅರವಳಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮದ್ಯದ ಬಾಟಲಿಗಳನ್ನು ಮುಕ್ತವಾಗಿ ಸಾಗಿಸುತ್ತಿರುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಹೇಳಿ ಕೇಳಿ ಗುಜರಾತ್​ ‘ಒಣ ರಾಜ್ಯ’. ಅಂದರೆ, ಗುಜರಾತಿನಲ್ಲಿ ಮದ್ಯ ಮಾರಾಟ ನಿಷಿದ್ಧ. ಹೀಗಾಗಿ ಅರಾವಳಿ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಭಾರಿ ವಿವಾದಕ್ಕೆ ಕಾರಣರಾಗಿದ್ದಾರೆ.
ಅರಾವಳಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಹಿರಂಗವಾಗಿ ಮದ್ಯದ ಪೆಟ್ಟಿಗೆಗಳನ್ನು ಒಯ್ಯುತ್ತಿದ್ದಾರೆ ಎಂದು ದೀಪಕ್ ಖತ್ರಿ ಎನ್ನುವವರು ಟ್ವಿಟ್ಟರ್‌ನಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ತಮ್ಮ ಟ್ವೀಟ್​ನಲ್ಲಿ ‘ಗುಜರಾತ್​ನ ಅರಾವಳಿ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಬಹಿರಂಗವಾಗಿ ಮದ್ಯದ ಬಾಕ್ಸ್​ಗಳನ್ನು ಹೊತ್ತೊಯ್ಯುತ್ತಿದ್ದಾರೆ. ಬಿಜೆಪಿಯವರು ಮದ್ಯ ಹಂಚುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಮೌನವಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಏನಾದರೂ ವಿವರಣೆ ನೀಡುವುದೇ’ ಎಂದು ದೀಪಕ್​ ಖತ್ರಿ ಬರೆದಿದ್ದಾರೆ. ಕೆಲವರು ಮದ್ಯದ ಬಾಟಲಿಗಳನ್ನು ಕಾರಿನಲ್ಲಿ ಹಾಕುತ್ತಿರುವುದು ವಿಡಿಯೋದಲ್ಲಿದೆ.
ಗುಜರಾತ್ ರಾಜ್ಯ ಚುನಾವಣಾ ಆಯೋಗದ ಪ್ರತಿಕ್ರಿಯೆ:ಅರಾವಳಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಮದ್ಯದ ಪೆಟ್ಟಿಗೆಗಳನ್ನು ಹೊತ್ತೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ನಂತರ ಗುಜರಾತ್ ರಾಜ್ಯ ಚುನಾವಣಾ ಆಯೋಗ ಪ್ರತಿಕ್ರಿಯಿಸಿದೆ.
ಈ ಬಗ್ಗೆ ಚುನಾವಣಾ ಆಯೋಗ ‘ನಿಷೇಧಾಜ್ಞೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅರಾವಳಿ ಜಿಲ್ಲೆಯ ಎಸ್‌ಪಿ ಪ್ರಕಾರ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. ಮಾಲ್‌ಪುರ ಪಿಎಸ್‌ಸಿಆರ್ ನಂ 6220/2022 ರ ಪ್ರಕಾರ ಗುಜ್ ಪ್ರೋಹಿಬಿಷನ್​ ಆ್ಯಕ್ಟ್, 1949 ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ರೆಜಿಸ್ಟ್ರೇಷನ್​ ನಂ ಜಿಜೆ 05 ಸಿಎಫ್ 8970 ರ 876 ವಾಹನದಲ್ಲಿ ₹87,600 ಮೌಲ್ಯದ ಐಎಂಎಫ್‌ಎಲ್ ಬಾಟಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ತಿಳಿಸಿದೆ.(ಏಜೆನ್ಸೀಸ್​)
In#GujaratAravalli BJP District President is openly carrying liquor boxes!BJP people's are distributing liquor and the Election Commission is silent on this, will the Election Commission give any clarification on this?#GujaratAssemblyPollshttps://t.co/5fRUdKmDvupic.twitter.com/5klAQuSd4T
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − four =
Remember me
