ಅಹಮದಾಬಾದ್​:ಗುಜರಾತ್​ ವಿಧಾನಸಭೆ ಚುನಾವಣೆಯಲ್ಲಿ ಮ್ಯಾಜಿಕ್​ ಅಂಕಿ ದಾಟಿರುವ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಭಾರೀ ಕುತೂಹಲ ಮೂಡಿಸಿದ್ದ ಮೊರ್ಬಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ಗೆಲುವು ಸಾಧಿಸಿದ್ದಾರೆ.
ಕಳೆದ ಅಕ್ಟೋಬರ್‌ 30ರಂದು ಮೊರ್ಬಿಯಲ್ಲಿ ಸಂಭವಿಸಿದ ತೂಗು ಸೇತುವೆ ಕುಸಿತ ದುರಂತದಲ್ಲಿ 40 ಮಕ್ಕಳು ಸೇರಿ 140ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈ ಘಟನೆ ಬಳಿಕ ಆಡಳಿತಾರೂಢ ಬಿಜೆಪಿಯನ್ನು ಕಾಂಗ್ರೆಸ್ ತೀವ್ರ ಟೀಕೆಗೆ ಒಳಪಡಿಸಿತ್ತು. ಮೊರ್ಬಿ ವಿಧಾನಸಭಾ ಕ್ಷೇತ್ರದಿಂದ ಜಯಂತಿ ಪಟೇಲ್​ರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಮತ್ತೊಂದೆಡೆ ಎಎಪಿ ಪಂಕಜ್ ರಂಸಾರಿಯಾ ಅವರನ್ನು ಕಣಕ್ಕಿಳಿಸಿತ್ತು. ಮೊರ್ಬಿ ಸೇತುವೆ ದುರಂತ ಪ್ರಕರಣ ಬಿಜೆಪಿ ಪಾಲಿಗೆ ಈ ಬಾರಿ ಮುಳುವಾಗಲಿದೆ ಎಂದೇ ಕಾಂಗ್ರೆಸ್​ ಮತ್ತು ಎಎಪಿ ಲೆಕ್ಕಾಚಾರ ಹಾಕಿದ್ದವು. ಆದರೆ ಅದೆಲ್ಲವೂ ಉಲ್ಟಾ ಆಗಿದೆ.
ಆದರೆ ಮೊರ್ಬಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾಗೆ ಮತದಾರರು ಮನ್ನಣೆ ನೀಡಿದ್ದಾರೆ. ಮೊರ್ಬಿಯಲ್ಲಿ ಸೇತುವೆ ಕುಸಿದು ನದಿಗೆ ಬಿದ್ದ ಜನರ ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ವತಃ ಅಮೃತಿಯಾ ಕೂಡ ಇದ್ದರು. ನೀರಿಗೆ ಇಳಿದು ಜನರನ್ನು ರಕ್ಷಿಸಿದ್ದರು. ಆ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದವು. ಮತ ಎಣಿಕೆ ದಿನವೂ ಈ ದೃಶ್ಯ ವೈರಲ್​ ಆಗುತ್ತಿದ್ದು, ಜನರ ಪ್ರಾಣ ಉಳಿಸಲು ನೀರಿಗಿಳಿದ ಅಮೃತಿಯಾಗ ಜನರು ಆಶೀರ್ವದಿಸಿದ್ದಾರೆ ಎಂದು ವರದಿಯಾಗಿದೆ.
ಗುಜರಾತ್​ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ವಿುಸಲಾಗಿದ್ದ ಶತಮಾನಗಳಷ್ಟು ಹಳೆಯ ತೂಗುಸೇತುವೆ ಕುಸಿದ ದುರಂತದಲ್ಲಿ ರಾಜ್‌ಕೋಟ್ ಲೋಕಸಭಾ ಕ್ಷೇತ್ರದ ಸದಸ್ಯ ಮೋಹನ್ ಕುಂದರಿಯಾ ಅವರ 12 ಸಂಬಂಧಿಕರೂ ಮೃತಪಟ್ಟಿದ್ದರು.

ಮೊರ್ಬಿ ಸೇತುವೆ ಕುಸಿತ ಪ್ರಕರಣ: ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆ, 9 ಜನರ ಬಂಧನ

ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

ದಿಲ್ಲಿಯಲ್ಲಿ ಗೆದ್ದು ಬೀಗಿದ್ದ ಆಪ್​ಗೆ ಗುಜರಾತ್​ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಹಿನ್ನಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + twelve =
Remember me
