ನವದೆಹಲಿ:ಗುಜರಾತ್, ಹಿಮಾಚಲಪ್ರದೇಶ ವಿಧಾನಸಭೆ ಹಾಗೂ ಐದು ರಾಜ್ಯಗಳಲ್ಲಿ ತೆರವಾದ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ.
ಡಿ.1 ಮತ್ತು 5ರಂದು ಗುಜರಾತ್​ನ 182 ವಿಧಾನಸಭಾ ಸೀಟುಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, 7ನೇ ಬಾರಿಗೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿ ಬಿಜೆಪಿಯಿದೆ. ಮತದಾನೋತ್ತರ ಸಮೀಕ್ಷೆ ಗಳೂ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಎಷ್ಟು ಸೀಟುಗಳನ್ನು ಗೆಲ್ಲಲಿದೆ ಎಂಬ ಕುತೂಹಲ ಗರಿಗೆದರಿದೆ.
ಗುಜರಾತ್​ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿತ್ತು. ಆದರೆ, ಈ ಬಾರಿ ಆಮ್ ಆದ್ಮಿ ಪಕ್ಷ ಚುನಾವಣಾ ಅಖಾಡ ಪ್ರವೇಶಿಸುವುದರೊಂದಿಗೆ ಗುಜರಾತ್ ತ್ರಿಕೋನ ಕದನಕ್ಕೆ ಸಾಕ್ಷಿಯಾಗಿದೆ. ಪ್ರಧಾನಿ ಮೋದಿ ರಾಜ್ಯದಲ್ಲಿ ಅಂದಾಜು 30 ಚುನಾವಣಾ ರಾಲಿಗಳನ್ನು ನಡೆಸಿದ್ದರು. ನಾಯಕತ್ವದ ಕೊರತೆಯಿಂದ ಬಳಲಿದ ಕಾಂಗ್ರೆಸ್, ಈ ಬಾರಿ ಹಲವು ಸೀಟುಗಳನ್ನು ಕಳೆದುಕೊಳ್ಳಬಹುದು ಎಂದು ಹೇಳಲಾಗಿದೆ.
ಕಳೆದ ಬಾರಿ ಕಾಂಗ್ರೆಸ್ ಜತೆ ಗುರುತಿಸಿಕೊಂಡಿದ್ದ ಅಲ್ಪೇಶ್ ಠಾಕೂರ್ ಮತ್ತು ಹಾರ್ದಿಕ್ ಪಟೇಲ್ ಈ ಬಾರಿ ಬಿಜೆಪಿ ಟಿಕೆಟ್​ನಿಂದ ಸ್ಪರ್ಧಿಸಿದ್ದಾರೆ. ಈ ಬಾರಿ ಒಟ್ಟು ಶೇ.66.31ರಷ್ಟು ಮತದಾನ ನಡೆದಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಶೇ.71.28ರಷ್ಟು ಮತದಾನವಾಗಿತ್ತು. 5 ವರ್ಷಗಳ ಬಳಿಕ ಮತದಾನ ಪ್ರಮಾಣ ಏರಿಕೆಯಾಗಬೇಕಿತ್ತು. ಆದರೆ, ಕಡಿಮೆಯಾಗಿರುವುದು ರಾಜಕೀಯ ಪಕ್ಷಗಳ ಚಿಂತೆಗೆ ಕಾರಣವಾಗಿದೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್ ಗಧಿ್ವ ಸೇರಿ ಒಟ್ಟು 1,621 ಅಭ್ಯರ್ಥಿಗಳ ಭವಿಷ್ಯ ಗುರುವಾರ ನಿರ್ಧಾರವಾಗಲಿದೆ. ಒಟ್ಟು 70 ರಾಜಕೀಯ ಪಕ್ಷ, ಸಂಘಟನೆಗಳು ಮತ್ತು 624 ಸ್ವತಂತ್ರ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಹುಜನ ಸಮಾಜ ಪಕ್ಷದಿಂದ (ಬಿಎಸ್​ಪಿ) 101 ಅಭ್ಯರ್ಥಿಗಳು ಮತ್ತು ಭಾರತೀಯ ಬುಡಕಟ್ಟು ಪಕ್ಷದಿಂದ (ಬಿಟಿಪಿ) 26 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 2017ರ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 99, ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದ್ದವು.
ಉಪಚುನಾವಣೆ ರಿಸಲ್ಟ್
ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ನಿಧನದಿಂದ ತೆರವಾದ ಉತ್ತರಪ್ರದೇಶದ ಮೇನ್​ಪುರಿ ಲೋಕಸಭಾ ಕ್ಷೇತ್ರ, ಒಡಿಶಾ, ಬಿಹಾರ, ರಾಜಸ್ಥಾನ, ಛತ್ತೀಸಗಢದ ತಲಾ ಒಂದು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಡಿ.5ರಂದು ಮತದಾನ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
