ಅಹಮದಬಾದ್​:2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮ ಕುರಿತು ವ್ಯಂಗ್ಯವಾಡಿ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಂಸತ್​ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಕೊಂಚ ರಿಲೀಪ್​ ದೊರೆತಿದೆ.
2 ವರ್ಷಗಳ ಜೈಲು ಶಿಕ್ಷೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನಡೆಸುವುದಾಗಿ ಗುಜರಾತ್​ ಹೈಕೋರ್ಟ್​ ತಿಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಹೇಮಂತ್ ಪ್ರಚಕ್ ಅವರಿದ್ದ ಏಕಸದಸ್ಯ ಪೀಠವು ರಾಹುಲ್ ಪರ ವಕೀಲರು ಶಿಕ್ಷೆಗೆ ತಡೆಯಾಜ್ಞೆ ನೀಡಲು ಆರು ಮೂಲಭೂತ ಆಧಾರಗಳನ್ನು ಮಂಡಿಸಿ ಶಿಕ್ಷೆಗೆ ತಡೆ ನೀಡುವಂತೆ ನ್ಯಾಯಪೀಠಕ್ಕೆ ಒತ್ತಾಯಿಸಿದ್ದಾರೆ.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮೇ2ಕ್ಕೆ ಮುಂದೂಡಿದ್ದರು.
ಇದನ್ನೂ ಓದಿ:ಮೋದಿಯವರೇ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ: ಸಿದ್ದರಾಮಯ್ಯ
ಈ ವೇಳೆ ಮಾತನಾಡಿದ ನ್ಯಾಯಾಧೀಶರು ಒಬ್ಬ ಚುನಾಯಿತ ಜನಪ್ರತಿನಿಧಿಯಾಗಿ ಹೇಳಿಕೆಗಳನ್ನು ನೀಡುವ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಜನರನ್ನು ಪ್ರತಿನಿಧಿಸುವವರು ತಮ್ಮ ಹೇಳಿಕೆಯನ್ನು ಎಚ್ಚರಿಕೆಯಿಂದ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಹಿಂದೆ ರಾಹುಲ್​ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾಯಾಧೀಶರು ಹಿಂದೆ ಸರಿದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + nine =
Remember me
