ಅಹಮದಾಬಾದ್:ಸಾಮಾಜಿಕ ಮಾಧ್ಯಮದ ಯುಗದಲ್ಲಿ ವೈರಲ್​ ಆಗುವ ಭರದಲ್ಲಿ ಇಲ್ಲಸಲ್ಲದ ಕೆಲಸ ಮಾಡಿ ಪೇಚಿಗೆ ಸಿಲುಕುತ್ತಾರೆ. ಇದೀಗ ಇದಕ್ಕೆ ಪೂರಕವೆಂಬಂತೆ ಘಟನೆಯೊಂದು ನಡೆದಿದ್ದು, ನಾಲ್ವರು ಯುವಕರು ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತಿನ ವಸದ್​ನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ.
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಇನ್ಸ್​ಟಾಗ್ರಾಂನಲ್ಲಿ ಲೈವ್​ ಬಂದಿರುವ ಐವರು ಯುವಕರು ಜೋರಾದ ಹಾಡನ್ನು ಹಾಕಿಕೊಂಡು ಕಾರನ್ನು 140 ಕಿಲೋಮೀಟರ್​ ವೇಗದಲ್ಲಿ ಚಲಾಯಿಸುವುದನ್ನು ನೋಡಬಹುದಾಗಿದೆ. ಇದಾದ ಕೆಲ ಕ್ಷಣಗಳ ಬಳಿಕ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗುವುದನ್ನು ನೋಡಬಹುದಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆ ನಡೆದಾಗ ಐವರು ಯುವಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಲೈವ್​ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅಜಾಗರೂಕ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ಹೇಳಿದ್ದಾರೆ.
It's painful to see these young boys risking their own and others' lives for attention and what they call "bhaukaal"As per details –This accident happend in Vasad ( GJ )Unfortunately, 4 out of 5 passengers died while the driver sustained some injuries.A case has been…pic.twitter.com/4ZzoBdjOwV
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − four =
Remember me
