ಅಹಮದಾಬಾದ್​:ಆಘಾತಕಾರಿ ಘಟನೆ ಒಂದರಲ್ಲಿ ಪ್ರಿಯಕರನೊಂದಿಗೆ ಓಡಿ ಹೋಗಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಗ್ರಾಮಸ್ಥರು ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಗುಜರಾತಿನ ದಾಹೋಡ್​ ಜಿಲ್ಲೆಯ ಬುಡಕಟ್ಟು ಪ್ರಾಬಲ್ಯವಿರುವ ಮಾರ್ಗಲಾ ಗ್ರಾಮದಲ್ಲಿ ನಡೆದಿದೆ.
ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ತನ್ನ ಪತ್ನಿ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಪ್ರಶ್ನಿಸದ ಪತಿ ಕುಣಿಯುತ್ತಿರುವುದು ಕಂಡು ಬರುತ್ತದೆ.
ಕೆಲ ದಿನಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದ ಮಹಿಳೆ ಗ್ರಾಮಕ್ಕೆ ವಾಪಸ್​ ಆಗಿರುವ ವಿಚಾರ ಗ್ರಾಮಸ್ಥರ ಗಮನಕ್ಕೆ ಬಂದಿದೆ. ಕೂಡಲ್ಲೇ ಸ್ಥಳಕ್ಕೆ ತೆರಳಿ ಮಹಿಳೆ ಹಾಗೂ ಆಕೆಯ ಪ್ರಿಯಕರನ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ:ಪುಷ್ಟ-2 ಚಿತ್ರತಂಡ ಪ್ರಯಾಣಿಸುತ್ತಿದ್ದ ಬಸ್​ ಅಪಘಾತ; ಹಲವರಿಗೆ ಗಂಭೀರ ಗಾಯ
ಸದ್ಯ ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಆಕೆಯ ಸೀರೆಯನ್ನು ಬಲವಂತವಾಗಿ ಪ್ರೇಮಿಯ ತಲೆಗೆ ಕಟ್ಟುತ್ತಿರುವುದು ಕಂಡು ಬರುತ್ತದೆ. ನಂತರ ಇವರಿಬ್ಬರನ್ನು ನಗ್ನ ಸ್ಥಿತಿಯಲ್ಲಿ ಗ್ರಾಮದ ತುಂಬಾ ಮೆರವಣಿಗೆ ಮಾಡಿಸಲಾಗಿದೆ ಎಂಧು ವರದಿಯಾಗಿದೆ.
ಘಟನೆ ನಡೆದ ಸ್ಥಳದಲ್ಲಿ ಹಾಜರಿದ್ದ ಮಹಿಳೆಯ ಪತಿ ತನ್ನ ಪತ್ನಿಯ ನೆರವಿಗೆ ಧಾವಿಸದೆ ಸಂತೋಷದಿಂದ ಕುಣಿಯುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತದೆ. ಹಲ್ಲೆ ಪ್ರಕರಣ ಸಂಬಂಧ ಪೊಲೀಸರು ಮಾರ್ಗಲಾ ಗ್ರಾಮದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twenty − 1 =
Remember me
