ನವದೆಹಲಿ:ಇತ್ತೀಚಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಗ್ಯಾಂಗ್​ವಾರ್​ ತಾರಕಕ್ಕೇರುತ್ತಿದೆ. ಇದೀಗ ದೆಹಲಿ ಗ್ರಾಮಾಂತರದ ನಜಾಫ್​ಗಢದಲ್ಲಿ ಇದೇ ರೀತಿಯ ಘಟನೆಯೊಂದು ನಡೆದಿದ್ದು, ರಾಷ್ಟ್ರರಾಜಧಾನಿಯನ್ನು ತಲ್ಲಣಗೊಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಬಂದೂಕುಧಾರಿಗಳಿಬ್ಬರು ಸಲೂನ್​ ಒಳಗೆ ನುಗ್ಗಿ ದಾಂಧಲೆ ನಡೆಸುತ್ತಾರೆ. ಬಳಿಕ ಅಲ್ಲಿದ್ದ ಇಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗುತ್ತಾರೆ. ಇದನ್ನು ನೋಡಿದ ಸಲೂನ್​ನಲ್ಲಿದ್ದ ವ್ಯಕ್ತಿಗಳು ಭಯದಿಂದ ಓಡಿ ಹೋಗುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.
ಇದನ್ನೂ ಓದಿ:ಮೂರನೇ ಟೆಸ್ಟ್​ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಶಾಕ್; ಸರಣಿಯಿಂದ ಹೊರಗುಳಿದ ಸ್ಟಾರ್​ ಬ್ಯಾಟ್ಸ್​ಮನ್
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ದ್ವಾರಕಾ ವಿಭಾಗದ ಡಿಸಿಪಿ ಅಂಕಿತ್ ಸಿಂಗ್, ನಜಾಫ್​ಗಢ ಮೆಟ್ರೋ ಪಿಲ್ಲರ್​ 80ರ ಬಳಿ ಇರುವ ಸಲೂನ್​ ಒಂದರಲ್ಲಿ ಗುಂಡಿನ ದಾಳಿಯಾಗಿದೆ ಎಂದು ನಮ್ಮ ಪಿಸಿಆರ್​ಗೆ ಕರೆ ಬಂತು. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ಈವರೆಗೆ ತಿಳಿದು ಬಂದಿಲ್ಲ. ಆರೋಪಿಗಳನ್ನು ಪತ್ತೆ ಹಚ್ಚಲು ಅಪರಾಧ ವಿಭಾಗ ಮತ್ತು ವಿಶೇಷ ಘಟಕದ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ತನಿಖೆಯನ್ನು ಚುರುಕುಗೊಳಿಸಲಾಗಿದ್ದು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ದ್ವಾರಕಾ ವಿಭಾಗದ ಡಿಸಿಪಿ ಅಂಕಿತ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 3 =
Remember me
