ಗುರುಗ್ರಾಮ್:ಬೀದಿ ನಾಯಿಗಳನ್ನು ಮನಬಂದಂತೆ ಥಳಿಸಿ ನಂತರ ತನ್ನ ಮನೆಯ ಮೇಲ್ಛಾವಣಿಯಿಂದ ರಸ್ತೆಗೆ ಎಸೆದಿರುವ ಮನಕಲುಕುವ ಘಟನೆ ಗುರುಗ್ರಾಮ್​ನಲ್ಲಿ ನಡೆದಿದೆ.ಹೋಶಿಯಾರ್ ಸಿಂಗ್ ಎಂಬಾತನೇ ಈ ನೀಚ ಕೃತ್ಯ ಎಸಗಿದ ಆರೋಪಿಯಾಗಿದ್ದು, ಈತನ ವಿರುದ್ಧ ಪ್ರಾಣಿ ಹಕ್ಕುಗಳ ಕಾರ್ಯಕರ್ತ ಅನುಭವ್ ಶರ್ಮಾ ದೂರು ಸಲ್ಲಿಸಿದ್ದಾರೆ. ಇನ್ನು ತೀವ್ರವಾಗಿ ಗಾಯಗೊಂಡಿದ್ದ ಎರಡು ನಾಯಿಗಳ ಪೈಕಿ ಒಂದು ಮೃತಪಟ್ಟಿದ್ದು, ಇನ್ನೊಂದು ನಾಯಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನೂ ಓದಿ:ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನ‌ ಲವ್ವಿ ಡವ್ವಿ; ಕಾಲೇಜಿನ ಮುಂದೆ ವಿದ್ಯಾರ್ಥಿಗಳಿಂದ ಪ್ರತಿಭಟನೆಜೂನ್ 1ರಂದು ಆರೋಪಿಯು ಎರಡು ಬೀದಿ ನಾಯಿಗಳನ್ನು ಬೀದಿಯಿಂದ ಎತ್ತಿಕೊಂಡು ನಂತರ ಅವುಗಳನ್ನು ಕೆಟ್ಟದಾಗಿ ಥಳಿಸಿ ಕೊನೆಗೆ ತನ್ನ ಮನೆಯ ಮೇಲ್ಛಾವಣಿಯಿಂದ ಕೆಳಗಿನ ರಸ್ತೆಗೆ ಎಸೆದಿದ್ದಾನೆ ಎಂದು ಶರ್ಮಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಅಲ್ಲದೇ, ಆರೋಪಿಯು ಈ ಹಿಂದೆ ಮೇ ತಿಂಗಳಲ್ಲಿ ಇತರ ಎರಡು ನಾಯಿಗಳನ್ನು ಸಹ ಕೊಂದಿದ್ದಾರೆ ಎಂದು ಶರ್ಮಾ ತಿಳಿಸಿದ್ದಾರೆ.ಆರೋಪಿಯ ಈ ಅಮಾನುಷ ಕೃತ್ಯ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಠಿಣ ಪ್ರಾಣಿ ಸಂರಕ್ಷಣಾ ಕಾನೂನುಗಳನ್ನು ಜಾರಿಗೆ ತರವಂತೆ ನೆಟ್ಟಿಗರು ಒತ್ತಾಯಿಸಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
