ವಾರಣಾಸಿ:ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಸಮೀಕ್ಷೆಯನ್ನು ಪ್ರಶ್ನಿಸಿ, ಮನವಿಯನ್ನು ಸಲ್ಲಿಸಿದ್ದ ಅಂಜುಮನ್ ಮಸೀದಿ ಸಮಿತಿಯ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.ಅಂಜುಮನ್ ಮಸೀದಿ ಸಮಿತಿಯು ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಅಲ್ಲದೇ, ಈ ಸಮೀಕ್ಷೆಯಿಂದ ರಚನೆಗೆ ಹಾನಿಯಾಗಬಹುದು ಎಂಬ ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ವೈಜ್ಞಾನಿಕ ಸಮೀಕ್ಷೆ ನಡೆಸಲು ದಾರಿ ಮಾಡಿಕೊಟ್ಟಿದೆ.ಇದನ್ನೂ ಓದಿ:ಸುಟ್ಟು ಕರಕಲಾದ ಸ್ಥಿತಿಯಲ್ಲಿ 14ರ ಬಾಲಕಿಯ ಮೃತದೇಹ ಪತ್ತೆ: ಆರೋಪಿಗಳ ಸುಳಿವು ಸಿಕ್ಕಿದ್ದು ಹೀಗೆ..ಜುಲೈ 21ರ ಆದೇಶದಲ್ಲಿ, ವಾರಣಾಸಿ ಜಿಲ್ಲಾ ನ್ಯಾಯಾಧೀಶರು 2023ರ ಮೇ ತಿಂಗಳಿನಲ್ಲಿ ನಾಲ್ವರು ಹಿಂದೂ ಮಹಿಳೆಯರು ಸಲ್ಲಿಸಿದ ಅರ್ಜಿಯ ಮೇರೆಗೆ ಜ್ಞಾನವಾಪಿ ಸಂಕೀರ್ಣದ ಎಎಸ್‌ಐ ಮೂಲಕ ಸಮೀಕ್ಷೆಗೆ ನಿರ್ದೇಶಿಸಿದ್ದರು. ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ಕೈಗೊಳ್ಳುವುದು ಇದರ ಉದ್ದೇಶವಾಗಿತ್ತು.ಅಂಜು ಮನ್ ಮಸೀದಿ ಸಮಿತಿಯು ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.
ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಜುಲೈ 27ರಂದು, ಈ ವಿಷಯವಾಗಿ ವಾದ-ಪ್ರತಿವಾದವನ್ನು ಆಲಿಸಿ, ಆಗಸ್ಟ್ 3ರಂದು ಹೈಕೋರ್ಟ್ ತನ್ನ ಆದೇಶವನ್ನು ನೀಡುವವರೆಗೆ ಸಮೀಕ್ಷೆಯನ್ನು ನಡೆಸಬಾರದೆಂದು ಸೂಚಿಸಿದ್ದರು. ಅದರಂತೆ ಇಂದು, ಹೈಕೋರ್ಟ್​ನಿಂದ ಆದೇಶವು ಹೊರಬಿದ್ದಿದ್ದು, ಎಎಸ್‌ಐ ಮೂಲಕ ಸರ್ವೆ ನಡೆಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
