ದೆಹಲಿ:ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಅನುಮತಿ ನೀಡಿರುವ ಅಲಹಾಬಾದ್​ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಈ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.ಸಮೀಕ್ಷೆಯನ್ನು ನಿಲ್ಲಿಸಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಮಸೀದಿ ಸಂಕೀರ್ಣದಲ್ಲಿ ಯಾವುದೇ ಉತ್ಖನನ ಮಾಡಬಾರದು ಮತ್ತು ಕಟ್ಟಡಕ್ಕೆ ಯಾವುದೇ ಹಾನಿ ಮಾಡಬಾರದು ಎಂದು ಸೂಚಿಸಿದ್ದು, ಈ ನಡುವೆ ಉತ್ತರಪ್ರದೇಶದ ವಾರಣಾಸಿಯ ಜ್ಞಾನವಾಪಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಇಲಾಖೆಯು ಇಂದು ಮುಂಜಾನೆಯೇ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದೆ.ಇದನ್ನೂ ಓದಿ:ಫ್ರಿಡ್ಜ್‌ಗಾಗಿ ನಡೆದಿತ್ತು 7 ತಿಂಗಳ ಗರ್ಭಿಣಿಯ ಹತ್ಯೆ: ಪೊಲೀಸರ ತನಿಖೆಯಿಂದ ತಿಳಿದು ಬಂದಿದಿಷ್ಟು..ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಕಾಶಿ ದೇವಾಲಯದ ಮೇಲೆ ನಿರ್ಮಿಸಿದರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಮೀಕ್ಷೆಗೆ ಜಿಲ್ಲಾ ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ, ಮುಸ್ಲಿಂ ಸಮಿತಿ ಅಲಹಾಬಾದ್​ ಹೈಕೋರ್ಟ್​ ಮೆಟ್ಟಿಲೇರಿತ್ತು.ಹೈಕೋರ್ಟ್ ಜಿಲ್ಲಾ ನ್ಯಾಯಾಲದ ಆದೇಶವನ್ನು ಎತ್ತಿ ಹಿಡಿದು​ ಮುಸ್ಲಿಂ ಸಮಿತಿ ಅರ್ಜಿಯನ್ನು ವಜಾಗೊಳಿಸಿ ಸಮೀಕ್ಷೆಗೆ ಅನುಮತಿಯನ್ನು ನೀಡಿತ್ತು. ತದನಂತರ ಸಮಿತಿಯು ಈ ಆದೇಶವನ್ನೂ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೆಟ್ಟಿಲೇರಿ ವೈಜ್ಞಾನಿಕ ಸಮೀಕ್ಷೆಗೆ ತಡೆನೀಡುವಂತೆ ಅರ್ಜಿ ಸಲ್ಲಿಸಿ ಈ ವಿಚಾರವನ್ನು ಮುಸ್ಲಿಂ ಸಂಘಟನೆ ಪರ ವಕೀಲ ನಿಜಾಮ್​ ಪಾಷಾ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ಮುಂದೆ ಪ್ರಸ್ತಾಪಿಸಿದ್ದು, ತಕ್ಷಣ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಕೋರಿದ್ದರು. ಅದರಂತೆ ಈ ವಿಚಾರವನ್ನು ಇಂದು ಕೈಗೆತ್ತಿಕೊಂಡಿದ್ದ ಸುಪ್ರೀಂ, ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್​ನಿಂದ ಗ್ರೀನ್​ ಸಿಗ್ನಲ್​​ ನೀಡಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 10 =
Remember me
