ನವದೆಹಲಿ:ಫೆಬ್ರವರಿ 08ರಂದು ಉತ್ತರಾಖಂಡದ ಹಲ್ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣದ ಮಾಸ್ಟರ್​ಮೈಂಡ್​ ಅಬ್ದುಲ್ ಮಲಿಕ್​​ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬಂಧಿಸಿ ಪೊಲೀಸರು ಆತನನ್ನು ಉತ್ತರಾಖಂಡಕ್ಕೆ ಕರೆತರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
#WATCH| Nainital Police has reached Haldwani after arresting Abdul Malik, the mastermind of the violence that took place on February 8 in Banbhoolpura, Haldwani, from Delhi.pic.twitter.com/QRlONTSVIj
ಇದನ್ನೂ ಓದಿ:ಟಿ-20 ವಿಶ್ವಕಪ್​; ಭಾರತ-ಪಾಕ್​ ಹೈವೋಲ್ಟೇಜ್​ ಕದನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್, ಕಾರಣ ಹೀಗಿದೆ
ಈ ಕುರಿತು ಪ್ರತಿಕ್ರಿಯಿಸಿರುವ ನೈನಿತಾಲ್​ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ, ಗುಜರಾತ್, ದೆಹಲಿ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆರೋಪಿ ಮಲಿಕ್​ ಹಾಗೂ ಆತನ ಪುತ್ರ ಅಬ್ದುಲ್ ಮೊಯಿದ್ ತಲೆಮಾರಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಇವರಿಬ್ಬರ ಹುಡುಕಾಟಕ್ಕಾಗಿ ಆರು ತಂಡಗಳನ್ನು ರಚಿಸಲಾಗಿತ್ತು.
ಮಲಿಕ್​ ಪುತ್ರ ತಲೆಮಾರಿಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮಲಿಕ್​ ಹೊರತುಪಡಿಸಿ ಶನಿವಾರ ಇನ್ನಿಬ್ಬರನ್ನು ಬಂಧಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಶೀಘ್ರದಲ್ಲೇ ತಲೆಮಾರಿಸಿಕೊಂಡಿರುವ ಮಲಿಕ್​ ಪುತ್ರನನ್ನು ಬಂಧಿಸಲಾಗುವುದು ಎಂದು ನೈನಿತಾಲ್​ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 9 =
Remember me
