ನವದೆಹಲಿ:ಉತ್ತರಾಖಂಡದ ಹಲ್ದ್ವಾನಿಯಲ್ಲಿ ಸಂಭವಿಸಿದ್ದ ಘರ್ಷಣೆಗೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್​ಮೈಂಡ್ ಅಬ್ದುಲ್​ ಮಲಿಕ್​​​ನನ್ನು ಪೊಲೀಸರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಧಿಸಿದ್ದಾರೆ.
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ್ದ ಘರ್ಷಣೆಯಲ್ಲಿ ಆರು ಮಂದಿ ಮೃತಪಟ್ಟಿದ್ದರು ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದರು.
ಇದನ್ನೂ ಓದಿ:ಬಿಜೆಪಿ-RSS ಎಷ್ಟೇ ದ್ವೇಷ ಹರಡಿದರೂ ಭಾರತೀಯರ DNAಯಲ್ಲೇ ಪ್ರೀತಿ ತುಂಬಿದೆ: ರಾಹುಲ್ ಗಾಂಧಿ
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮದರಸಾ ನಿರ್ಮಿಸಲಾಗಿದ್ದ ಜಾಗ ಮಲಿಕ್​ಗೆ ಸೇರಿತ್ತು ಎಂದು ಹೇಳಲಾಗಿದ್ದು, ಸರ್ಕಾರಕ್ಕೆ ಸೇರಿದ ಜಮೀನನ್ನು ಅಕ್ರಮವಾಗಿ ಖರೀದಿಸಿದ ಎಂದು ತಿಳಿದು ಬಂದಿದೆ. ಘಟನೆ ನಡೆದ ಬಳಿಕ ಆರೋಪಿ ತಲೆಮಾರಿಸಿಕೊಂಡಿದ್ದು, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಹಲ್​ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ 60 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನಷ್ಟು ಜನರ ಬಂಧನವಾಗುವ ಸಾಧ್ಯತೆಯಿದೆ. ಬಂಧಿತರ ಪೈಕಿ ಓರ್ವ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕನ ಸಹೋದರ ಎಂದು ತಿಳಿದು ಬಂದಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಹಲ್​ದ್ವಾನಿ ನಗರದಲ್ಲಿ ಇಂಟರ್​ನೆಟ್​ ಸೇವೆಯನ್ನು ಮರುಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್​ಗಳನ್ನು ಶೇರ್​ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:9 + 10 =
Remember me
