ನವದೆಹಲಿ: ಕೇವಲ ಒಂದೇ ಒಂದು ದಿನ ನನಗೆ ಸಿಬಿಐ ಮತ್ತು ಇ.ಡಿ. (ಜಾರಿ ನಿರ್ದೇಶನಾಲಯ) ನಿಯಂತ್ರಣವನ್ನು ನೀಡಿ, ಬಿಜೆಪಿಯ ಅರ್ಧದಷ್ಟು ಜನರು ಜೈಲಿನಲ್ಲಿರುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಖಾಸಗಿ ಟಿವಿ ವಾಹಿನಿಯೊಂದಿಗೆ ಮಾತನಾಡಿರುವ ಕೇಜ್ರಿವಾಲ್, ‘‘ಕಳೆದ ಏಳು ವರ್ಷಗಳಲ್ಲಿ, ಬಿಜೆಪಿಯವರು ಎಎಪಿ ನಾಯಕರ ವಿರುದ್ಧ 167 ಪ್ರಕರಣಗಳನ್ನು ದಾಖಲಿಸಿದ್ದಾರೆ, ಒಂದೂ ನ್ಯಾಯಾಲಯದಲ್ಲಿ ಸಾಬೀತಾಗಿಲ್ಲ. ಎಎಪಿ ನಾಯಕರನ್ನು 150ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ. ಉಳಿದವು ವಿಚಾರಣೆಗೆ ಬಾಕಿ ಇವೆ. ತನಿಖಾ ಸಂಸ್ಥೆಯ 800 ಅಧಿಕಾರಿಗಳು ಎಎಪಿ ನಾಯಕರ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ ಮೀಸಲಾಗಿದ್ದಾರೆ. ಆದರೆ ಅವರಿಗೆ ಏನೂ ಸಿಕ್ಕಿಲ್ಲ. ಸುಳ್ಳು ಪ್ರಕರಣಗಳನ್ನು ದಾಖಲಿಸಿದ ಕಾರಣ ಏಜೆನ್ಸಿಗಳು ನ್ಯಾಯಾಲಯಕ್ಕೆ ಅಲೆದಾಡುತ್ತಿವೆ’’ ಎಂದಿದ್ದಾರೆ.
ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಚಿವ ಸತ್ಯೇಂದ್ರ ಜೈನ್ ಕಳೆದ ಆರು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿನ ಹಗರಣದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಎಫ್‌ಐಆರ್‌ನಲ್ಲಿ ಆರೋಪಿ ಎಂದು ಹೆಸರಿಸಲಾಗಿದೆ. ಆಪ್ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅವರು ಇಡಿ ಕಸ್ಟಡಿಯಲ್ಲಿದ್ದಾರೆ.
ಎಂಸಿಡಿ ಚುನಾವಣೆಯಲ್ಲಿ ಎಎಪಿ ಭರ್ಜರಿ ಬಹುಮತದೊಂದಿಗೆ ಗೆಲ್ಲಲಿದೆ. 250ರಲ್ಲಿ 230ಕ್ಕೂ ಹೆಚ್ಚು ಸೀಟುಗಳನ್ನು ಎಎಪಿ ಪಡೆಯಲಿದೆ. ಬಿಜೆಪಿ 20ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿದೆ. ಗುಜರಾತ್‌ನಲ್ಲಿಯೂ ಎಎಪಿ ಚುನಾವಣೆ ಗೆಲ್ಲುತ್ತದೆ ಎಂದು ಕೇಜ್ರಿವಾಲ್ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 8 =
Remember me
