ಬಿಹಾರ:ಐಎಎಸ್ ಅಧಿಕಾರಿಯೊಬ್ಬರ ಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ 14 ವರ್ಷಗಳ ಕಾಲ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿದ್ದ ಬಿಹಾರದ ಮಾಜಿ ಸಂಸದ ಆನಂದ್ ಮೋಹನ್ ಸಿಂಗ್ ತಾವು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ.
ಬಿಹಾರದ ಅರಾರಿಯಾದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ಈ ದೇಶ ಯಾರ ಸ್ವತ್ತಲ್ಲ. ನಾನು ಕಾನೂನು ಮತ್ತು ಸಂವಿಧಾನವನ್ನು ನಂಬುತ್ತೇನೆ. ಯಾವುದೇ ದೂರುಗಳಿಲ್ಲದೆ 15 ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆಯನ್ನು ಅನುಭವಿಸಿದ್ದೇನೆ. ನಾನು ತಪ್ಪಿತಸ್ಥನೆಂದು ಸರ್ಕಾರ ನಂಬಿದರೆ ನಾನು ಗಲ್ಲಿಗೇರಲು ಸಿದ್ಧ ಎಂದು ಮಾಜಿ ಸಂಸದರು ಹೇಳಿದರು.
ಇದನ್ನೂ ಓದಿ:ಪತ್ನಿಯ ಶೋಕಿಗೆ ಬಲಿಯಾಯ್ತು ಸುಂದರ ಕುಟುಂಬ; ಮಕ್ಕಳೊಂದಿಗೆ ಪ್ರಾಣಬಿಟ್ಟ ತಂದೆ
1994ರ ದುಷ್ಕೃತ್ಯವೊಂದರಲ್ಲಿ ಅಧಿಕಾರಿಯೊಬ್ಬರ ಹತ್ಯೆಯಾಗಿತ್ತು. ಹತ್ಯೆಗೈದ ಗುಂಪನ್ನು ಪ್ರಚೋದಿಸಿದ ಆರೋಪದಲ್ಲಿ ಮಾಜಿ ಸಂಸದ ತಪ್ಪಿತಸ್ಥನೆಂದು ಸಾಬೀತಾಗಿತ್ತು. ಆದರೆ ಸದ್ಯ, ಬಿಹಾರ ಸರ್ಕಾರ ಜೈಲಿನ ನೀತಿ-ನಿಯಮಗಳನ್ನು ಬದಲಾಯಿಸಿದ ಬೆನ್ನಲ್ಲೇ ಮಾಜಿ ಸಂಸದ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಜತೆಗೆ, 27 ಅಪರಾಧಿಗಳ ಬಿಡುಗಡೆಗೂ ಇದು ದಾರಿ ಮಾಡಿಕೊಟ್ಟಿದೆ. ಆನಂದ್ ಮೋಹನ್ ಸಿಂಗ್ ಅವರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಕುರಿತು ಸುಪ್ರೀಂ ಕೋರ್ಟ್ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + eighteen =
Remember me
