ದೆಹಲಿ:ಅಕ್ರಮವಾಗಿ ನಿರ್ಮಿಸಲಾಗಿದ್ದ ಹನುಮಾನ್ ದೇವಸ್ಥಾನ ಮತ್ತು ದರ್ಗಾವನ್ನು ನೆಲಸಮಗೊಳಿಸಿರುವ ಘಟನೆ ದೆಹಲಿಯ ಭಜನಪುರ ಪ್ರದೇಶದಲ್ಲಿ ನಡೆದಿದೆ.ಭಾನುವಾರ ಬೆಳಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಭಜನಪುರ ಪ್ರದೇಶದಲ್ಲಿ ದೇವಸ್ಥಾನ ಹಾಗೂ ದರ್ಗಾವನ್ನು ಕೆಡವಲು ಹೆಚ್ಚಿನ ಸಂಖ್ಯೆಯ ಸಿಆರ್‌ಪಿಎಫ್‌ ಮತ್ತು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಸಹರಾನ್‌ಪುರ ಹೆದ್ದಾರಿಯ ಅಗಲೀಕರಣದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.ಇದನ್ನೂ ಓದಿ:ರಾಜ್ಯದಲ್ಲಿ ವೈಎಸ್​​ಟಿ ತೆರಿಗೆ ಜಾರಿಗೆ ಬಂದಿದೆ; ಎಚ್​​ಡಿಕೆ ನೇರ ಆರೋಪ!
ಸಹರಾನ್‌ಪುರ ಹೆದ್ದಾರಿಯ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ದೆಹಲಿ ಧಾರ್ಮಿಕ ಸಮಿತಿಯ ಸಭೆಯ ನಂತರ ಧಾರ್ಮಿಕ ಕಟ್ಟಡಗಳನ್ನು ಕೆಡವಲು ನಿರ್ಧರಿಸಲಾಗಿದೆ ಎಂದು ಈಶಾನ್ಯ ಡಿಸಿಪಿ ಜಾಯ್ ಎನ್ ಟಿರ್ಕಿ ತಿಳಿಸಿದ್ದಾರೆ.ಎರಡೂ ಕಟ್ಟಡಗಳನ್ನು ಶಾಂತಿಯುತವಾಗಿ ತೆಗೆದುಹಾಕಲಾಗಿದ್ದು, ಹನುಮಾನ್ ದೇವಾಲಯದ ಕಟ್ಟಡವನ್ನು ನೆಲಕ್ಕೆ ಕೆಡವುವ ಮೊದಲು, ಪ್ರಾರ್ಥನೆಗಳನ್ನು ಸಲ್ಲಿಸಿ ದೇವತಾ ಪ್ರತಿಮೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಈ ಕ್ರಮಕ್ಕೆ ಪ್ರತಿಕ್ರಿಯಿಸಿದ ಆಮ್ ಆದ್ಮ ಪಕ್ಷದ (ಎಎಪಿ) ನಾಯಕ ಅತಿಶಿ ಅವರು ಟ್ವಿಟರ್‌ನಲ್ಲಿ ದೆಹಲಿ ಲೆಫ್ಟಿನೆಂಟ್ ವಿಕೆ ಸಸ್ಸೇನಾ ಅವರನ್ನು ರಾಷ್ಟ್ರ ರಾಜಧಾನಿಯಲ್ಲಿನ ದೇವಾಲಯ ಮತ್ತು ಧಾರ್ಮಿಕ ಸ್ಥಳಗಳನ್ನು ಕೆಡವದಂತೆ ವಿನಂತಿಸಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 18 =
Remember me
