ನವದೆಹಲಿ:ಕರಾಳ ಘಟನೆ ನಡೆದ ಏಳು ವರ್ಷದ ನಂತರ ತಡವಾದರೂ ನಿರ್ಭಯಾ ಪ್ರಕರಣಕ್ಕೆ ನ್ಯಾಯ ದೊರೆತಿದೆ. ಇಂದು ಬೆಳ್ಳಂಬೆಳಗ್ಗೆ ನಿರ್ಭಯಾ ಅಪರಾಧಿಗಳನ್ನು ನೇಣಿಗೆ ಏರಿಸಲಾಗಿದ್ದು, ಅತ್ಯಾಚಾರಿಗಳಿಗೆ ಇದೊಂದು ಪಾಠವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಬಗ್ಗೆ ಮಾತನಾಡಿರುವ ನಿರ್ಭಯಾ ತಂದೆ, ಅಪರಾಧಿಗಳ ಗಲ್ಲು ಶಿಕ್ಷೆಯ ಕ್ಷಣವನ್ನು ಭಾರತದ ಎಲ್ಲ ನಗರಗಳ, ಪಟ್ಟಣಗಳ ಮತ್ತು ಗ್ರಾಮಗಳ ಜನರು ಆಚರಿಸುತ್ತಿದ್ದಾರೆ. ದೀರ್ಘಕಾಲದ ಹೋರಾಟವೇ ನಡೆಯಿತು. ನ್ಯಾಯ ವಿಳಂಬವಾಗಲು ಅಪರಾಧಿಗಳ ಹಲವಾರು ತಂತ್ರಗಳೇ ಕಾರಣ ಎಂದರು.
ಅಪರಾಧಿಗಳಾದ ಮುಕೇಶ್​ ಕುಮಾರ್​ ಸಿಂಗ್​, ಪವನ್​ ಕುಮಾರ್​ ಗುಪ್ತ, ವಿನಯ್​ ಕುಮಾರ್​ ಶರ್ಮ ಮತ್ತು ಅಕ್ಷಯ್​ ಕುಮಾರ್​ ಸಿಂಗ್​ರನ್ನು ಇಂದು ಬೆಳಗ್ಗೆ 5.30ರ ಸಮಯದಲ್ಲಿ ತಿಹಾರ್​ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು.
23 ವರ್ಷದ ಪ್ಯಾರಾಮೆಡಿಕಲ್​ ವಿದ್ಯಾರ್ಥಿನಿಯನ್ನು ಡಿಸೆಂಬರ್​ 16, 2012ರಂದು ಬಾಲಾಪಾರಾಧಿ ಸೇರಿದಂತೆ ಒಟ್ಟು ಆರು ಮಂದಿ ಮೃಗೀಯವಾಗಿ ಅತ್ಯಾಚಾರವೆಸಗಿ, ಕೊಲೆಗೈದು ವಿಕೃತಿ ಮೆರೆದಿದ್ದರು.
ಒಟ್ಟು ಆರು ಅಪರಾಧಿಗಳಲ್ಲಿ ರಾಮ ಸಿಂಗ್​ ತಿಹಾರ್​ ಜೈಲಿನಲ್ಲೇ 2013 ಮಾರ್ಚ್​ನಲ್ಲಿ ಪಾಪಾಪ್ರಜ್ಞೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ಮತ್ತೊಬ್ಬ ಬಾಲಾಪಾರಾಧಿಯನ್ನು ಅಪರಾಧ ನಡೆದ ಮೂರು ವರ್ಷಗಳ ಬಳಿಕ ಬಿಡುಗಡೆ ಮಾಡಲಾಗಿತ್ತು.(ಏಜೆನ್ಸೀಸ್​)
ತಿಹಾರ್​ ಜೈಲಿನಲ್ಲಿ ನೇಣುಗಂಬಕ್ಕೆ ಏರಿದ ನಿರ್ಭಯಾ ಅತ್ಯಾಚಾರ ಅಪರಾಧಿಗಳು; ಮಾಡಿದ ಪಾಪಕ್ಕೆ ಕುಣಿಕೆಯಲ್ಲಿ ಹೋಯ್ತು ಜೀವ

ನಿರ್ಭಯಾ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು: ತಾಯಿ ಆಶಾದೇವಿ ಅವರ ಮೊದಲ ಪ್ರತಿಕ್ರಿಯೆ ಇದಾಗಿತ್ತು..

ನ್ಯಾಯ ದೊರೆತರೂ ಮತ್ತೆ ಸುಪ್ರೀಂಕೋರ್ಟ್​ ಮೆಟ್ಟಿಲೇರುತ್ತೇನೆಂದು ನಿರ್ಭಯಾ ತಾಯಿ ಹೇಳಿದ್ಯಾಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 4 =
Remember me
