ನವದೆಹಲಿ:ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ 2021 ‘ಹ್ಯಾಪಿ ನ್ಯೂ ಇಯರ್’​ ಆಗುವ ಲಕ್ಷಣಗಳು ಗೋಚರಿಸಿವೆ. ಏಕೆಂದರೆ ಕೇಂದ್ರ ಸರ್ಕಾರ ಈಗ ಹೊಸದೊಂದು ಆಫರ್ ಕೊಟ್ಟಿದ್ದು, ರೈತರ ಬೇಡಿಕೆ ಬಹುತೇಕ ಈಡೇರಿ, ಪ್ರತಿಭಟನೆಗೆ ಅಂತ್ಯ ಕಾಣುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರತಿಭಟನಾನಿರತ ರೈತ ಮುಖಂಡರ ಜತೆ ಮತ್ತೊಮ್ಮೆ ಮಾತುಕತೆ ನಡೆಸುವ ಬಗ್ಗೆ ಸೋಮವಾರ ಘೋಷಿಸಿರುವ ಕೇಂದ್ರ ಸರ್ಕಾರ, ಡಿ. 30ರಂದು ನಡೆಯುವ ಮಾತುಕತೆಗೆ ಬರುವಂತೆ ಆಹ್ವಾನಿಸಿದೆ. ಬುಧವಾರ ದೆಹಲಿಯ ವಿಜ್ಞಾನ ಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಈ ಮಾತುಕತೆ ನಡೆಯಲಿದೆ.
ಇನ್ನೊಂದೆಡೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ರೈತ ಮುಖಂಡ ದರ್ಶನ್​ ಪಾಲ್​, ಕೃಷಿ ಕಾಯ್ದೆಗಳನ್ನು ವಿರೋಧಿಸಿ ಡಿ. 30ರಂದು ಕುಂಡ್ಲಿ-ಮನೇಸರ್-ಪಲ್ವಾಲ್ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್​ ಜಾಥಾ ನಡೆಸುವುದಾಗಿ ಹೇಳಿದ್ದಾರೆ. ಮಾತ್ರವಲ್ಲದೆ, ದೆಹಲಿ ಹಾಗೂ ಇತರ ಭಾಗಗಳಿಂದರ ರೈತರು ಹಾಗೂ ಸಾರ್ವಜನಿಕರು ಇದರಲ್ಲಿ ಭಾಗವಹಿಸುವ ಮೂಲಕ ಹೊಸ ವರ್ಷವನ್ನು ಆಚರಣೆ ಮಾಡಬೇಕು ಎಂಬುದಾಗಿ ಅವರು ಕರೆ ನೀಡಿದ್ದಾರೆ. (ಏಜೆನ್ಸೀಸ್)
ನೈಟ್​ ಕರ್ಫ್ಯೂ ರದ್ದಾದರೇನಂತೆ, ಇವರಿಗಿನ್ನೂ ಅದೇ ಚಿಂತೆ!

ಈ ಧರ್ಮಗುರುವಿಗೆ 130 ಪತ್ನಿಯರು, 203 ಮಕ್ಕಳು: ಇವರ ಕುತೂಹಲದ ಸ್ಟೋರಿ ಇಲ್ಲಿದೆ…

2000 ವರ್ಷಗಳ ಹಿಂದೆಯೇ ಇತ್ತು ಫಾಸ್ಟ್​ಫುಡ್ ಮಳಿಗೆ​: ಇದು ಪತ್ತೆಯಾದದ್ದೇ ರೋಚಕ

‘ಸೆಕ್ಸ್​ಪರ್ಟ್’​ ಇನ್ನಿಲ್ಲ: ಇವರಿದ್ದಾಗ ಸಿಕ್ಕಿತ್ತು ಅದೆಷ್ಟೋ ಮಂದಿಗೆ ಸಾಂತ್ವನ-ಸಮಾಧಾನ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − two =
Remember me
