ಮುಂಬೈ:ಬಾಲಿವುಡ್ ನಟಿ ನತಾಶಾ ಸ್ಟಾಂಕೋವಿಕ್ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿಚ್ಛೇದನದ ವದಂತಿಗೆ ಇಂದು ತೆರೆ ಬಿದ್ದಿದೆ. ಈ ಜೋಡಿ ತಮ್ಮ ವಿಚ್ಛೇದನ ಕುರಿತಾಗಿ ಸೋಶಿಯಲ್​​ ಮೀಡಿಯಾದಲ್ಲಿ  ಸ್ಪಷ್ಟನೆ ನೀಡಿದೆ. ಆದರೆ ಈ ಸುದ್ದಿ ಬೆನ್ನಲ್ಲೇ ಪಾಂಡ್ಯ ಹೆಸರು ಸ್ಟಾರ್ ಹಿರೋಯಿನ್​ ಜತೆ ಸೇರಿಕೊಂಡಿದೆ.

A post shared by Instant Bollywood (@instantbollywood)

ಪಾಂಡ್ಯ ಮತ್ತು ಸ್ಟಾಂಕೋವಿಕ್ ಮೇ 2020 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಲಾಕ್‌ಡೌನ್ ಸಮಯದಲ್ಲಿ ಇಬ್ಬರೂ ಕೋರ್ಟ್ ಮದುವೆ ಮಾಡಿಕೊಂಡಿದ್ದರು. ಅದೇ ವರ್ಷ ಅಂದರೆ ಜುಲೈ 2020 ರಲ್ಲಿ ಈ ದಂಪತಿಗಳಿಗೆ ಗಂಡು ಮಗು ಜನಿಸಿತ್ತು. ಆ ಬಳಿಕ ಮಗನ ಎದುರಿಗೆ ಈ ಇಬ್ಬರು 2023 ರಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯಗಳ ಪ್ರಕಾರ ಮತ್ತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಇದೀಗ ಈ ದಂಪತಿಗಳು ತಮ್ಮ 4 ವರ್ಷದ ಜೊತೆ ಪಯಣಕ್ಕೆ ಅಂತ್ಯ ಹಾಡಿದ್ದಾರೆ.
Was she really seeking Hardik's attention, or is there more to the story? 👀byu/Illustrious-One-7058inBollyBlindsNGossip

ವಿಚ್ಛೇದನ ನೀಡಿ ಒಂದು ವಾರ ಕಳೆಯುವ ಮುನ್ನವೇ ಇದೀಗ ಹಾರ್ದಿಕ್​ ಮತ್ತೊಂದು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಬಾಲಿವುಡ್​ನ ಖ್ಯಾತ ನಟಿಯನ್ನು ಪಾಂಡ್ಯ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ಹಾರ್ದಿಕ್​ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಜಂಟಿ ಹೇಳಿಕೆ ಪ್ರಕಟಿಸುವ ಮೂಲಕ ತಮ್ಮ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು.
ಪಾಂಡ್ಯ ಬಾಲಿವುಡ್ ನಟಿ ಅನನ್ಯ ಪಾಂಡೆ ಜತೆ ಚಾಟಿಂಗ್​, ಡೇಟಿಂಗ್​ ಆರಂಭಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಂಡ್ಯ ಇನ್‌ಸ್ಟಾಗ್ರಾಂನಲ್ಲಿ ಅನನ್ಯ ಪಾಂಡೆ ಅವರನ್ನು ದೀಢಿರ್​ ಆಗಿ ಫಾಲೋ ಮಾಡಲಾರಂಭಿಸಿದ್ದು. ಅತ್ತ ಅನನ್ಯ ಪಾಂಡೆ ಕೂಡಾ ಹಾರ್ದಿಕ್ ಪಾಂಡ್ಯ ಅವರನ್ನು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲಾರಂಭಿಸಿದ್ದಾರೆ.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಯ ಸಂದರ್ಭದಲ್ಲೂ ಹಾರ್ದಿಕ್ ಪಾಂಡ್ಯ ಹಾಗೂ ಅನನ್ಯ ಪಾಂಡೆ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅಲ್ಲದೇ ಇಬ್ಬರೂ ಜತೆಯಾಗಿ ಬಿಂದಾಸ್ ಡ್ಯಾನ್ಸ್​ ಕೂಡ ಮಾಡಿದ್ದರು. ಈ ಘಟನೆ ನಡೆದ 2 ದಿನಗಳ ಬಳಿಕ ಇದೀಗ ಇಬ್ಬರು ಪರಸ್ಪರ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಲೊ ಮಾಡಿಕೊಂಡಿದ್ದಾರೆ. ಸದ್ಯ ಚಾಟಿಂಗ್​ನಲ್ಲಿರುವ ಈ ಜೋಡಿ ಮುಂದೆ ಡೇಟಿಂಗ್​ ಮಾಡಲಿದ್ದಾರೆ ಎಂದು ಕೆಲ ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.
ಈ ವಿಚಾರ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಹೊಸ ಸಂಚಲನ ಹುಟ್ಟುಹಾಕಿದ್ದು ಪಾಂಡ್ಯ ಸದ್ಯದಲ್ಲೇ ಅನನ್ಯ ಪಾಂಡೆ ಜತೆ ಹಸೆಮಣೆ ಏರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಆದರೆ ಈ ಕುರಿತಾಗಿ ಪಾಂಡ್ಯ, ಅನನ್ಯ ಮಾತನಾಡಿಲ್ಲ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 3 =
Remember me
