ನವದೆಹಲಿ:ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಳೆದ ವಾರ ತಮ್ಮ ಪಾದಕ್ಕೆ ಗಾಯ ಮಾಡಿಕೊಂಡಿದ್ದು, ಇನ್ನೂ ಕೆಲವು ಪಂದ್ಯಗಳಿಗೆ ಅವರು ಲಭ್ಯವಾಗುವುದಿಲ್ಲ ಎನ್ನಲಾಗುತ್ತಿದೆ.
ಇದನ್ನೂ ಓದಿ:ಸಾಮಾಜಿಕ ಮಾಧ್ಯಮಗಳಿಗೆ “ಫ್ರೀಪಾಸ್​” ದಿನಗಳು ಮುಗಿದಿವೆ: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಭಿಮತಗಾಯದಿಂದಾಗಿ ಈಗಾಗಲೇ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಿಂದ ಹೊರಗುಳಿದಿರುವ ಹಾರ್ದಿಕ್, ಇನ್ನೂ ಚೇತರಿಸಿಕೊಳ್ಳದ ಕಾರಣ ಭಾರತದ ಮುಂದಿನ ಎರಡು ವಿಶ್ವಕಪ್ ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಅ.19 ರಂದು ಪುಣೆಯಲ್ಲಿ ಬಾಂಗ್ಲಾ ವಿರುದ್ಧ ಆಡುವಾಗ ಪಾಂಡ್ಯ ಜಾರಿ ಬಿದ್ದು ಪಾದಕ್ಕೆ ಗಾಯ ಮಾಡಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಮಂಡಿ ಉಳುಕಿತ್ತು. ಇದರಿಂದಾಗಿಯೇ ಅ.22 ರಂದು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಹೊರಗುಳಿದರು. ಗಾಯದ ನಿರ್ವಹಣೆಗಾಗಿ ಕಳೆದ ಸೋಮವಾರ ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ವರದಿ ಮಾಡಿದ್ದರು.
ಇಂಗ್ಲೆಂಡ್ ವಿರುದ್ಧದ ಭಾರತದ ಮುಂದಿನ ಪಂದ್ಯಕ್ಕಾಗಿ ಹಾರ್ದಿಕ್ ಲಕ್ನೋಗೆ ಪ್ರಯಾಣಿಸಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಹಿಂದೆ ಹೇಳಿತ್ತು. ಆದರೆ ಹಾರ್ದಿಕ್ ಎಡ ಪಾದದ ಊತವು ಗಣನೀಯವಾಗಿ ಕಡಿಮೆಯಾಗಿದೆಯಾದರೂ ಇನ್ನೂ ಚಿಕಿತ್ಸೆ ಮುಂದುವರಿಸಿರುವುದರಿಂದ ಅವರು ಈ ವಾರಾಂತ್ಯದಲ್ಲಿ ಬೌಲಿಂಗ್ ಶುರು ಮಾಡಬಹುದು. ಇದೀಗ ಅವರಿಗೆ ಚೇತರಿಕೆಗೆ ಸಮಯ ನೀಡುವುದು ಮುಖ್ಯವಾಗಿದೆ ಎಂದು ಎನ್​ ಸಿಎ ಮೂಲಗಳು ತಿಳಿಸಿವೆ.
ಭಾರತವು ಇದುವರೆಗಿನ ಎಲ್ಲಾ ಐದು ಪಂದ್ಯಗಳನ್ನು ಗೆದ್ದಿರುವುದರಿಂದ ಸೆಮಿಫೈನಲ್‌ಗೆ ಹೋಗಲು ಸುಸ್ಥಿತಿಯಲ್ಲಿರುವುದರಿಂದ ಮುಂದಿನ ಎರಡು ಪಂದ್ಯಗಳಲ್ಲಿ ಪಾಂಡ್ಯಗೆ ವಿಶ್ರಾಂತಿ ನೀಡಬಹುದು, ಅದು ನಾಕ್-ಔಟ್‌ಗೆ ಮೊದಲು ಅವರು ಸಂಪೂರ್ಣ ಚೇತರಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.
“ನನ್ನ ಗುರು ಜತೆ ಮತ್ತೆ ಕೆಲಸ ಮಾಡುತ್ತಿದ್ದೇನೆ”: ಸಂತಸ ಹಂಚಿಕೊಂಡ ತಲೈವಾ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
