ಹರಿಯಾಣ:ಲಾರಿ ಹಾಗೂ ಮಿನಿ ಬಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ಅಂಬಾಲಾದಲ್ಲಿ ಶುಕ್ರವಾರ ನಸುಕಿನ ಜಾವ ನಡೆದಿದೆ. ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ.
ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Haryana | Seven people died and more than 20 people were injured in a bus accident on the Ambala-Delhi-Jammu National Highway: Dr. Kaushal Kumar, Civil Hospital, Ambala Cantthttps://t.co/Iu332pIKq4pic.twitter.com/6JcaJ4gxSv
ಇದನ್ನೂ ಓದಿ: ರಾಜಸ್ಥಾನ ವಿರುದ್ಧ 4 ವಿಕೆಟ್​ಗಳ ಸೋಲು; ಆರ್​ಸಿಬಿ ಮಾಜಿ ನಾಯಕ ವಿರಾಟ್​ ಕೊಹ್ಲಿ ಹೇಳಿದ್ದಿಷ್ಟು
ಈ ಕುರಿತು ಪ್ರತಿಕ್ರಿಯಿಸಿರುವ ಅಂಬಾಲಾ ಕ್ಯಾಂಟ್‌ನ ವೈದ್ಯಕೀಯ ಅಧಿಕಾರಿ ಡಾ.ಕೌಶಲ್ ಕುಮಾರ್, ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ನಿದ್ರೆಯಲ್ಲಿದ್ದರು, ಎಂದು ತಿಳಿದು ಬಂದಿದೆ.
ಅಪಘಾತ ಸಂಭವಿಸಿದ ವೇಳೆ ಲಾರಿ ಚಾಲಕ ಪಾನಮತ್ತನಾಗಿದ್ದ ಎಂದು ವರದಿಯಾಗಿದೆ. ಅಪಘಾತದ ಬಳಿಕ ಆತ ಪರಾರಿಯಾಗಿದ್ದು, ಪೊಲೀಸರು ಆತನನ್ನು ಪತ್ತೆ ಹಚ್ಚುತ್ತಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಂಬಾಲಾ ಕ್ಯಾಂಟ್‌ನ ವೈದ್ಯಕೀಯ ಅಧಿಕಾರಿ ಡಾ.ಕೌಶಲ್ ಕುಮಾರ್ ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
