ಚಂಡಿಗಢ:ಆನ್​ಲೈನ್​ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಹರಿಯಾಣ ಸರ್ಕಾರ 3 ಲಕ್ಷ ಟ್ಯಾಬ್ಲೆಟ್​​ಗಳನ್ನು ವಿತರಿಸುವ ಇ-ಅಧಿಗಮ್​ ಯೋಜನೆಗೆ ಚಾಲನೆ ನೀಡಿದೆ.
ಈ ಯೋಜನೆಯಲ್ಲಿ 3 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್​ ನೀಡಲಾಗುವುದು. 10 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಇ ಯೋಜನೆ ವ್ಯಾಪ್ತಿಗೆ ಬರಲಿದ್ದು, ಸಾಫ್ಟ್​ವೇರ್ ಕಲಿಕೆಗೆ ಹೆಚ್ಚು ಅನುಕೂಲವಾಗಲು ಈ ನಿರ್ಧಾರ ಕೈಗೊಂಡಿದೆ ಎಂದು ಸರ್ಕಾರ ತಿಳಿಸಿದೆ.
ಇನ್ನೂ 5 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್​ ನೀಡುವ ಗುರಿ ಹೊಂದಿದ್ದು, 9ನೇ ತರಗತಿ ವಿದ್ಯಾರ್ಥಿಗಳಿಗೂ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಮನೋಹರ್​ ಲಾಲ್​ ಖಟ್ಟರ್ ತಿಳಿಸಿದ್ದಾರೆ. ಕರೊನಾ ಸಮಯದಲ್ಲಿ ಆನ್ಲೈನ್​ ಶಿಕ್ಷಣಕ್ಕೆ ಆಗಿದ್ದ ತೊಂದರೆಯನ್ನು ನಿವಾರಿಸಲು ಸರ್ಕಾರವೇ ಈ ತೀರ್ಮಾನ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 17 =
Remember me
