ಚಂಢೀಗಡ:ಹರಿಯಾನದ ಯಮುನಾನಗರ ಜಿಲ್ಲೆಯಲ್ಲಿ ಶಂಕಿತ ನಕಲಿ ಮದ್ಯ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ರಾಜ್ಯ ಕಾಂಗ್ರೆಸ್​ ಘಟಕ ಸ್ಥಳೀಯ ನಾಯಕನನ್ನು ಉಚ್ಚಾಟಿಸಿ ಆದೇಶ ಹೊರಡಿಸಿದೆ.
ನಕಲಿ ಮದ್ಯ ಸೇವಿಸಿದ ಪರಿಣಾಮ ಯಮುನಾನಗರದ ಮಂಡೆಬರಿ ಗ್ರಾಮದ ನಿವಾಸಿಗಳಾದ ರಮೇಶ್ ಮತ್ತು ಸುಶೀಲ್​ ಮೃತರು ಎಂದು ತಿಳಿದು ಬಂದಿದೆ. ಇವರಿಬ್ಬರು ನಕಲಿ ಮದ್ಯ ಮಾರಾಟ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ನಾಲ್ಕು ವರ್ಷಗಳ ಹಿಂದೆ ನಡೆದದ್ದು ಇತಿಹಾಸ; ಸೆಮಿಫಿನಾಲೆಯಲ್ಲಿ ನಡೆಯುವುದು…: ಲಾಕಿ ಫರ್ಗ್ಯೂಸನ್
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೃತ ರಮೇಶ್​ ಹಾಗೂ ಸುಶೀಲ್​ ಇಬ್ಬರು ನಕಲಿ ಮದ್ಯ ಮಾರಾಟದ ಪ್ರಮುಖ ಆರೋಪಿಗಳೆಂದು ತಿಳಿದು ಬಂದಿದೆ. ಆರೋಪಿಗಳಿಬ್ಬರು ನಕಲಿ ಮದ್ಯ ಸೇವಿಸಿದ ಪರಿಣಾಮ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಬ್ಬರ ಸ್ಥಿತಿ ಚಿಂತಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ.
ನಕಲಿ ಮದ್ಯ ಮಾರಾಟ ಪ್ರಕರಣದಲ್ಲಿ ಯಮುನಾನಗರ ಜಿಲ್ಲೆಯ ಪ್ರಭಾವಿ ನಾಯಕ ಎಂದೇ ಗುರುತಿಸ್ಲಪಟ್ಟಿರುವ ಮಾಂಗೆ ರಾಮ್ ಮರುಪುರ್​ರನ್ನು ರಾಜ್ಯ ಕಾಂಗ್ರೆಸ್​ ಘಟಕ ಉಚ್ಚಾಟಿಸಿ ಆದೇಶ ಹೊರಡಿಸಿದೆ. ಪ್ರಾಥಮಿಕ ತನಿಖೆ ವೇಳೆ ನಕಲಿ ಮದ್ಯ ಮಾರಾಟ ಪ್ರಕರಣದಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಕಾರಣಕ್ಕಾಗಿ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್​ ಘಟಕದ ಹಿರಿಯ ನಾಯಕರೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
