ನವದೆಹಲಿ:ಭಾರತ-ಚೀನಾ ಗಡಿ ಸಂಘರ್ಷಕ್ಕೆ ಸಂಬಂಧಪಟ್ಟಂತೆ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪೂರ್ವ ಲಡಾಖ್​​ನ ವಾಸ್ತವ ಗಡಿ ರೇಖೆ ಬಳಿ ಪರಿಸ್ಥಿತಿ ಏನಿದೆ ಎಂಬುದನ್ನು ಬಹಿರಂಗಪಡಿಸಿ ಎಂದು ಗೃಹ ಸಚಿವ ಅಮಿತ್​ ಷಾ ಅವರನ್ನು ಒತ್ತಾಯಿಸಿದ್ದಾರೆ.
ಗಲ್ವಾನ್​ ಕಣಿವೆ, ಡೆಪ್ಸಾಂಗ್, ಪ್ಯಾಂಗೊಂಗ್​ ತ್ಸೋನಿಂದ ಚೀನಾ ಸೇನೆಯನ್ನು ಹೊರಹಾಕಲು ಯುದ್ಧ ಘೋಷಣೆ ಮಾಡಲಾಗಿದೆಯೇ? ಎಂದು ಟ್ವಿಟರ್​ನಲ್ಲಿ ಪ್ರಶ್ನಿಸಿದ್ದಾರೆ.
ಗೃಹ ಸಚಿವ ಅಮಿತ್​ ಷಾ ಅವರು ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಭಾರತ ಕೊವಿಡ್​-19 ಮತ್ತು ಪೂರ್ವ ಲಡಾಖ್​​ನಲ್ಲಿ ನಡೆಯುತ್ತಿರುವ ಗಡಿ ಸಂಘರ್ಷ ಎರಡರ ವಿಚಾರದಲ್ಲೂ ಪರಿಣಾಮಕಾರಿಯಾಗಿ ಹೋರಾಡುತ್ತಿದೆ ಎಂದು ಹೇಳಿದ್ದರು.ಅದಾದ ಕೆಲವೇ ಹೊತ್ತಲ್ಲಿ ಓವೈಸಿ ಟ್ವೀಟ್​ ಮಾಡಿದ್ದಾರೆ. ಗಡಿಯಲ್ಲಿ ಇರುವ ವಾಸ್ತವ ಪರಿಸ್ಥಿತಿಯನ್ನು ದೇಶಕ್ಕೆ ತಿಳಿಸಿ ಎಂದಿದ್ದಾರೆ.ಈಗಾಗಲೇ ಕಾಂಗ್ರೆಸ್​ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದೆ. ಭಾರತ-ಚೀನಾ ಸಂಘರ್ಷವನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದೆ.
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸೇರಿ ಹಲವು ಮುಖಂಡರು ಕೇಂದ್ರ ಸರ್ಕಾರಕ್ಕೆ ಅನೇಕ ಪ್ರಶ್ನೆಗಳನ್ನು ಹಾಕುತ್ತಿದ್ದಾರೆ. ವಾಗ್ದಾಳಿ ನಡೆಸುತ್ತಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರೂ ಸಹ, ಗಡಿಯಲ್ಲಿ ಉಂಟಾದ ಯೋಧರ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಎಂದಿದ್ದಾರೆ. (ಏಜೆನ್ಸೀಸ್​)
ಬೇಳೆ ಸಂಸ್ಕರಣಾ ಯಂತ್ರದಲ್ಲಿ ಬಿದ್ದು ಛಿದ್ರವಾಯ್ತು ಮಹಿಳೆಯ ದೇಹ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − two =
Remember me
