ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ನಡೆದ ಬಳಿಕ ಹಿಂದು ಸಮುದಾಯಕ್ಕೆ ಶುಭಾಶಯ ಕೋರಿದ್ದ ಕ್ರಿಕೆಟರ್​ ಮೊಹಮ್ಮದ್​ ಶಮಿ ಅವರ ಪತ್ನಿ ಹಸೀನ್ ಜಹಾನ್​ಗೆ ಅತ್ಯಾಚಾರ ಬೆದರಿಕೆ ಹಾಕಲಾಗಿದೆ. ಶಮಿಯಿಂದ ಸದ್ಯ ಬೇರ್ಪಟ್ಟಿರುವ ಹಸೀನ್​, ಈ ಬಗ್ಗೆ ಕೋಲ್ಕತ್ತ ಸೈಬರ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇದನ್ನೂ ಓದಿ:ಇಡುಕ್ಕಿ ಭೂಕುಸಿತದ ಭೀಕರತೆ; ಇಂದು 16 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆದ ರಕ್ಷಣಾ ಸಿಬ್ಬಂದಿ
ಆಗಸ್ಟ್​ 5ರಂದು ಅಯೋಧ್ಯೆಯ ರಾಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ನಾನು ಹಿಂದು ಸೋದರ-ಸೋದರಿಯರಿಗೆ ಶುಭಾಶಯ ಕೋರಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದೆ. ಆದರೆ ಕೆಲವು ಕೀಳು ಮನೋಭಾವವುಳ್ಳ ಜನರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ನನ್ನ ಮೇಲೆ ರೇಪ್​ ಮಾಡುವುದಾಗಿ ಸಂದೇಶಗಳು ಬರುತ್ತಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಫೇಸ್​ಬುಕ್​, ಇನ್ಸ್ಟಾಗ್ರಾಂ, ಟ್ವಿಟರ್​ಗಳ ಮೂಲಕ ನಿರಂತರವಾಗಿ ಬೆದರಿಕೆ ಒಡ್ಡಲಾಗುತ್ತಿದೆ. ನನಗೆ ಅಭದ್ರತಾ ಭಾವ ಕಾಡುತ್ತಿದೆ. ಇದು ಹೀಗೆ ಮುಂದುವರಿದರೆ ನಾನು ಮಾನಸಿಕ ಖಿನ್ನತೆಗೆ ಒಳಗಾಗುತ್ತೇನೆ ಎಂದು ಹಸೀನ್​ ಹೇಳಿದ್ದಾರೆ.
ನಾನು ನನ್ನ ಮಗಳೊಂದಿಗೆ ಒಬ್ಬಳೇ ವಾಸವಾಗಿದ್ದೇನೆ. ಹಾಗಾಗಿ ಮಾನವೀಯತೆ ದೃಷ್ಟಿಯಿಂದಲಾದರೂ ಆದಷ್ಟು ಶೀಘ್ರವೇ ಈ ವಿಚಾರದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. (ಏಜೆನ್ಸೀಸ್​)
ಈತ ಟ್ವಿಟರ್​​ನಲ್ಲಿ ಪೋಸ್ಟ್ ಮಾಡಿದ್ದು ಪುಸ್ತಕಗಳ ಫೋಟೋ; ಕೂಡಲೇ ಬಂತು ಮದುವೆ ಪ್ರಪೋಸಲ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 1 =
Remember me
