ಲಖನೌ:ಬಹಳ ಸಂಚಲನ ಸೃಷ್ಟಿಸಿದ್ದ ಹಾಥರಸ್​ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್​ಐಟಿ)ದಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಯ ಪತ್ನಿ ಶನಿವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡುಬಂದಿದ್ದು, ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿಯೇ ಸೀಲಿಂಗ್​ ಫ್ಯಾನ್​ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪುಷ್ಪಾ ದೇವಿ (36) ಅವರ ಶವ ಪತ್ತೆಯಾಗಿದೆ. ಇವರು ಉನ್ನಾವೋದ ಪೊಲೀಸ್ ಟ್ರೇನಿಂಗ್ ಸೆಂಟರ್​ನ ಡಿಐಜಿ ಚಂದ್ರಪ್ರಕಾಶ್ ಅವರ ಪತ್ನಿ. ಹಾಥರಸ್​ನಲ್ಲಿ ಕಳೆದ ತಿಂಗಳು ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ ಮೂವರು ಸದಸ್ಯರ ಪೈಕಿ ಚಂದ್ರ ಪ್ರಕಾಶ್ ಒಬ್ಬರು.
ಇದನ್ನೂ ಓದಿ:ಶಾಲಾ ಕಟ್ಟಡಕ್ಕೆಂದು ತೆಗಿದಿದ್ದ ಪಿಲ್ಲರ್ ಗುಂಡಿಯಲ್ಲಿ ಬಿದ್ದು ಮೂವರು ಮಕ್ಕಳ ದಾರುಣ ಸಾವು..!
ಆತ್ಮಹತ್ಯೆ ಮಾಡಿಕೊಂಡದ್ದೇಕೆ ಎಂಬುದಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ. ಆತ್ಮಹತ್ಯಾ ಪತ್ರವೂ ಸ್ಥಳದಲ್ಲಿ ಸಿಕ್ಕಿಲ್ಲ. ಹೀಗಾಗಿ ಪ್ರಕರಣ ಕಗ್ಗಂಟಾಗಿ ಉಳಿದಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. (ಏಜೆನ್ಸೀಸ್)
ಹಾಥರಸ್​ ಘಟನೆ ನೆಪದಲ್ಲಿ ಹರಿದುಬಂತು ₹100 ಕೋಟಿ: ಇ.ಡಿಗೆ ದೊರೆತಿದೆ ಭಯಾನಕ ಸಾಕ್ಷ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eighteen =
Remember me
