ಲಖನೌ:ಧಾರ್ಮಿಕ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ಬಸ್​ ಹಾಗೂ ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ಮಂದಿ ಮೃತಪಟ್ಟು, 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಹತ್ರಾಸ್​ನ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ನಡೆದಿದೆ.
ಈ ಕುರಿತು ಮಾತನಾಡಿರುವ ಅಲಿಘರ್ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಶಲಭ್ ಮಾಥುರ್, ಶುಕ್ರವಾರ ಸಂಜೆ 6:45ರ ಸುಮಾರಿಗೆ ಅಪಘಾತ ಸಂಭಭವಿಸಿದ್ದು, ಸಾರಿಗೆ ನಿಗಮದ ಬಸ್​ ಓವರ್​ಟೇಕ್​ ಮಾಡಲು ಮುಂದಾದಾಗ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಹತ್ರಾಸ್ ಜಿಲ್ಲೆಯ ಚಂದ್ಪಾ ಪೊಲೀಸ್ ಠಾಣೆ ವ್ಯಾಪ್ತಿಯ ಮೆಟೈ ಗ್ರಾಮದ ಬಳಿ ನಡೆದಿದ್ದು, 17 ಮಂದಿ ಮೃತಪಟ್ಟಿದ್ದಾರೆ. 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ 08 ಜನರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದು, ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಟ್ವೀಟ್​ ಮಾಡಿದ್ದಾರೆ. ಘಟನೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಗಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಘೋಷಿಸಿದ್ದಾರೆ.
उत्तर प्रदेश के हाथरस जिले में हुई सड़क दुर्घटना में कई लोगों की मृत्यु का समाचार अत्यंत दुखद है। अपने स्वजनों को खोने वाले शोक संतप्त परिवारों के प्रति मैं गहन संवेदना व्यक्त करती हूं तथा घायल हुए लोगों के शीघ्र स्वस्थ होने की कामना करती हूं।
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve − 2 =
Remember me
