ಲಖನೌ:ಹಾಥರಸ್​ನಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 120ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯ ನಂತರ ಸ್ವಘೋಷಿತ ದೇವಮಾನವ ಭೋಲೆ ಬಾಬಾ ವಿವಾದದ ಕೇಂದ್ರ ಬಿಂದುವಾಗಿದ್ದು, ದುರಂತ ಸಂಭವಿಸಿದ ಬಳಿಕ ಅವರು ತಲೆಮಾರಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆಯೇ ಘಟನೆಗೆ ಸಂಬಂಧಿಸಿದಂತೆ ಭೋಲೆ ಬಾಬಾ ಪ್ರತಿಕ್ರಿಯಿಸಿದ್ದು, ಇದು ಪಿತೂರಿ ಎಂದು ಆರೋಪಿಸಿದ್ದಾರೆ.
ತಮ್ಮ ವಕೀಲರ ಮೂಲಕ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಭೋಲೆ ಬಾಬಾ ನಾವು ಮೃತರ ಕುಟುಂಬಳಿಗೆ ಸಂತಾಪ ಸೂಚಿಸುತ್ತೇವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ. ಘಟನೆಯಲ್ಲಿ ಸಮಾಜ ವಿರೋಧಿಗಳ ಕೈವಾಡವಿದ್ದು, ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ತನಿಖೆಯಾಗಬೇಕಿದ್ದು, ಸರ್ಕಾರ ಈ ಬಗ್ಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಘಟನೆಯ ನಂತರ ಭೋಲೆ ಬಾಬಾ ಕಾಣೆಯಾಗಿದದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಗಾಯಾಳುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ನಮ್ಮ ಸರ್ಕಾರ ಸುಮ್ಮನೇ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.
First responce from Bhole Baba Ashram after stampede incident. Appointed Advocate AP Singh for legal actionpic.twitter.com/jXdq1AxW4H
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 5 =
Remember me
