ಲಖನೌ:ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಿಕಂದರಾವು ಪ್ರದೇಶದ ರತಿಭಾನ್‌ಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಭೋಲೆ ಬಾಬಾ ಅವರ ಸತ್ಸಂಗದಲ್ಲಿ ಹಠಾತ್ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 121 ಜನರು ಮೃತಪಟ್ಟಿದ್ದಾರೆ. ಗಾಯಗೊಂಡ ಹಲವರನ್ನು ಆಸ್ಪತ್ರೆಗೆ ದಾಖಲಿಸಿದ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನು ಓದಿ:ಪ್ರಚಾರಕಲ್ಲ.. ವಿಶ್ವಾಸದ ರಾಜಕಾರಣಕ್ಕೆ ದೇಶದ ಜನರ ಆದ್ಯತೆ; ಪ್ರಧಾನಿ ಮೋದಿ
ಕಾಲ್ತುಳಿತದಲ್ಲಿ ಗಾಯಗೊಂಡವರು ಹತ್ರಾಸ್​​​ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗಾಯಾಳುಗಳನ್ನು ಬುಧವಾರ (ಜುಲೈ 3) ಸಿಎಂ ಯೋಗಿ ಆದಿತ್ಯ ನಾಥ್​ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಗಾಯಾಳುಗಳ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ತೋರದಂತೆ ಹಾಗೂ ನುರಿತ ವೈದ್ಯರ ನೇತೃತ್ವದಲ್ಲಿ ಪ್ರಥಮ ಆದ್ಯತೆಯ ಮೇಲೆ ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ಅಪಘಾತದಲ್ಲಿ 16 ಜಿಲ್ಲೆಗಳ ಜನರು ಬಲಿಯಾಗಿದ್ದಾರೆ. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಯಲಿದೆ. ಎಸ್‌ಐಟಿ ರಚನೆ ಮಾಡಲಾಗಿದೆ. ಎಸ್‌ಐಟಿ ಸಂಪೂರ್ಣ ತನಿಖೆ ನಡೆಸುತ್ತಿದೆ. 24 ಗಂಟೆಗಳಲ್ಲಿ ತನಿಖಾ ವರದಿ ನೀಡುವಂತೆ ಹೇಳಿರುವ ಸಿಎಂ ಯೋಗಿ ಆದಿತ್ಯನಾಥ್​​ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.
ಕೇವಲ 80,000 ಮಂದಿಗೆ ಅನುಮತಿ ನೀಡಿದ ಕಾರ್ಯಕ್ರಮಕ್ಕೆ 2.5 ಲಕ್ಷ ಜನರು ಸೇರುವುದರೊಂದಿಗೆ ಸಂಘಟಕರು ಸಾಕ್ಷ್ಯಗಳನ್ನು ಮರೆಮಾಡಿದ್ದಾರೆ ಮತ್ತು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ. ಸತ್ಸಂಗದಲ್ಲಿ ಪಾಲ್ಗೊಂಡು ಮನೆಗೆ ಮರಳಲು ಪ್ರಯತ್ನಿಸುತ್ತಿರುವ ಸುಮಾರು 3,000 ಜನರಿಗೆ ರೈಲ್ವೆ ವಿಶೇಷ ವ್ಯವಸ್ಥೆ ಮಾಡಿದೆ ಎನ್ನಲಾಗಿದೆ. (ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + eight =
Remember me
