ನವದೆಹಲಿ:ಹಾಥರಸ್​ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್​ರೇಪ್ ಮತ್ತು ಕೊಲೆ​ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಮೃತದೇಹವನ್ನು ಆತುರವಾಗಿ ನಡುರಾತ್ರಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರ ತಡೆಗಟ್ಟುವ ನಿಟ್ಟಿನಲ್ಲಿ ರಾತ್ರಿಯೇ ಅಂತ್ಯ ಸಂಸ್ಕಾರ ಮಾಡಬೇಕಾಯಿತು ಎಂದು ಸುಪ್ರೀಂಕೋರ್ಟ್​ಗೆ ಮಂಗಳವಾರ ತಿಳಿಸಿದೆ.
ಪ್ರಕರಣ ಸಂಬಂಧ ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಅಫಿಡೆವಿಟ್​ನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಸ್ಪಷ್ಟನೆ ನೀಡಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬಂದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೈಅಲರ್ಟ್​ ಘೋಷಿಸಲಾಗಿತ್ತು.
ಇದನ್ನೂ ಓದಿ:ಸುಶಾಂತ್​ ಸಿಂಗ್​ರದ್ದು ಆತ್ಮಹತ್ಯೆಯಲ್ಲ ಕೊಲೆ: ಸ್ಫೋಟಕ ಆಡಿಯೋ ಸಂಭಾಷಣೆ ಲೀಕ್..!
ಸೆ. 29ರಂದು ಸಂತ್ರಸ್ತ ಯುವತಿ ದೆಹಲಿಯ ಸಫ್ದಾರ್​ಜಂಗ್​ ಆಸ್ಪತ್ರೆಯಲ್ಲಿ ಮೃತಪಟ್ಟ ಬೆನ್ನಲ್ಲೇ ಆಸ್ಪತ್ರೆ ಆವರಣದಲ್ಲೇ ಬೃಹತ್​ ಪ್ರತಿಭಟನೆ ನಡೆಯಿತು. ಈ ಎಲ್ಲ ಘಟನೆಗೆ ಜಾತಿ ಮತ್ತು ಕೋಮು ಬಣ್ಣ ಬಳಿದು ಹಿಂಸಾಚಾರ ಸೃಷ್ಟಿಸುವ ಸಂಚು ನಡೆದಿದೆ ಎಂಬ ಅನೇಕ ಗುಪ್ತಚರ ಮಾಹಿತಿಗಳು ಹಾಥರಸ್​ ಜಿಲ್ಲಾಡಳಿತ ಗಮನಕ್ಕೆ ಬಂದಿದ್ದವು.
ಯುವತಿ ಮೃತಪಟ್ಟ ಮಾರನೇ ದಿನ ಸಮುದಾಯ ಅಥವಾ ಜಾತಿಯ ಲಕ್ಷಾಂತರ ಮಂದಿ ರಾಜಕೀಯ ಪಕ್ಷಗಳು ಮತ್ತು ಮಾಧ್ಯಮಗಳ ಬೆಂಬಲದೊಂದಿಗೆ ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದರು. ಇದು ಹಿಂಸಾಚಾರಕ್ಕೆ ತಿರುಗಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇತ್ತು. ಇದಕ್ಕೆ ಸಂಬಂಧಿಸಿದ ಗುಪ್ತಚರ ವರದಿಯು ಇದ್ದವು. ಅಲ್ಲದೆ, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಹೊರಬಿದ್ದಿತ್ತು. ಇದರೊಂದಿಗೆ ಕರೊನಾ ವೈರಸ್​ ಸುರಕ್ಷತಾ ನಿಯಮಗಳು ಜಾರಿಯಲ್ಲಿದ್ದವು.
ಇಂತಹ ವಿಷಮ ಸ್ಥಿತಿಯಲ್ಲಿ ಬೆಳಗಿನ ಜಾವ ತುಂಬಾ ಜನ ಸೇರುವದನ್ನು ತಡೆಗಟ್ಟಲು ಕುಟುಂಬದ ಅನುಮತಿ ಪಡೆದು ಧಾರ್ಮಿಕ ವಿಧಿವಿಧಾನಗಳಂತೆ ಶವಸಂಸ್ಕಾರ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿತು. ಯುವತಿ ಮೃತಪಟ್ಟು ಶವಪರೀಕ್ಷೆ ನಡೆದ ಬಳಿಕವೂ 20ಗಂಟೆಗಳವರೆಗೆ ಶವ ಹಾಗೇ ಉಳಿದಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ನಡುರಾತ್ರಿ 2.45ರ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಿದೆವು ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.(ಏಜೆನ್ಸೀಸ್​)
ಅತ್ತೆಯ ಮೇಲೆ ಅಳಿಯನಿಂದ ಅತ್ಯಾಚಾರ! ಪೊಲೀಸರಿಗೆ ಹೆದರಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 5 =
Remember me
