ನವದೆಹಲಿ:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ ನೇತೃತ್ವದ ಇಂಡಿಯಾ ಮೈತ್ರಿಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಸಂಪತ್ತು ಸಮೀಕ್ಷೆ ಮಾಡಿ ಹಂಚುವ ವಿಚಾರ ರಾಷ್ಟ್ರ ರಾಜಕಾರಣದಲ್ಲಿ ಗೆದ್ದಲ ಎಬ್ಬಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರತಿಕ್ರಿಯಿಸಿದ್ದು, ನಾನು ಆ ರೀತಿ ಹೇಳಿಯೇ ಇಲ್ಲ ಎಂದು ಯು-ಟರ್ನ್​ ಹೊಡೆದಿದ್ದಾರೆ.
ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ನಾನು ಸಂಪತ್ತು ಸಮೀಕ್ಷೆ ಮಾಡಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ದೇಶ ಎದುರಿಸುತ್ತಿರುವ ಅನ್ಯಾಯದ ಪ್ರಮಾಣವನ್ನು ಕಂಡು ಹಿಡಿಯಲು ಮಾತ್ರ ನಾನು ಬಯಸುತ್ತೇನೆ. ಆ ಅರ್ಥದಲ್ಲಿ ನಾನು ಹೇಳಿಕೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಸಂಪತ್ತು ಸಮೀಕ್ಷೆಯೂ ಆರ್ಥಿಕ ಮತ್ತು ಸಾಂಸ್ಥಿಕ ವರದಿಯನ್ನು ಒಳಗೊಂಡಿರುತ್ತದೆ. ಸಮಾಜದ ವಿವಿಧ ವಿಭಾಗಗಳು ವರ್ಷಗಳಲ್ಲಿ ಹೇಗೆ ಅಭಿವೃದ್ಧಿ ಹೊಂದಿದ್ದವು ಮತ್ತು ಎಲ್ಲಾ ಗುಂಪುಗಳಿಗೆ ಸಾಮಾಜಿಕ-ಆರ್ಥಿಕ ನ್ಯಾಯ ಮತ್ತು ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಏನು ಅಗತ್ಯವಿದೆ ಎಂಬುದನ್ನು ಅರ್ಥಮಾಡಿಕೊಳ್ಳುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ರಾಹುಲ್​ ಗಾಂಧಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ಈ ಒಂದು ಕಾರಣಕ್ಕಾಗಿ ನಾವು ಅಂದು ಚಹಲ್​ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ: ಮೈಕ್​ ಹೆಸ್ಸನ್
ಭಾರತದ ಶೇ.90ರಷ್ಟು ಜನತೆಗೆ ಅನ್ಯಾಯವಾಗುತ್ತಿದೆ. ಇದನ್ನು ನಾವು ತಿಳಿದುಕೊಳ್ಳಲು ಸಂಪತ್ತು ಹಾಗೂ ಜಾತಿ ಸಮೀಕ್ಷೆ ಕುರಿತು ಪ್ರಧಾನಿ ಪ್ರತಿಕ್ರಿಯಿಸಿದ ರೀತಿ ನೋಡಿ ನನಗೆ ಅವರ ಹೆದರಿರುವಂತೆ ಕಾಣುತ್ತಿದೆ. ಏಕೆಂದರೆ ಅವರು ನಾವು ಹೇಳಿಕೆ ನೀಡಿದ ಕೆಲವೇ ಕ್ಷಣಗಳಲ್ಲಿ ಅವರು ನಮ್ಮ ಮೇಲೆ ದಾಳಿ ಮಾಡಿದ ರೀತಿ ನೋಡಿದರೆ ಅವರು ಹೆದರಿರುವುದು ಕಾಣುತ್ತದೆ ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.
ಏಪ್ರಿಲ್​ 07ರಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಜಾತಿ ಹೊರತುಪಡಿಸಿ ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆ ಒಂದನ್ನು ನಡೆಸಲಾಗುವುದು ಎಂದು ಹೇಳಿದ್ದರು. ಇತ್ತ ರಾಹುಲ್​ ಗಾಂಧಿ ಹಾಗೂ ಕಾಂಗ್ರೆಸ್​ ನಾಯಕರ ಹೇಳಿಕೆಯನ್ನೆ ಅಸ್ತ್ರ ಮಾಡಿಕೊಂಡ ಪ್ರಧಾನಿ ಮೋದಿ ಕೈ ಪಡೆ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 20 =
Remember me
