ಉತ್ತರಪ್ರದೇಶ:ಎರಡು ಗುಂಪುಗಳ ನಡುವೆ 2007ರಲ್ಲಿ ನಡೆದ ಗೋರಖ್‌ಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪದೇ ಪದೇ ಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತಿದ್ದ ವ್ಯಕ್ತಿಗೆ ಅಲಹಾಬಾದ್ ನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಿದೆ.
2007 ರ ಜನವರಿ 27 ರಂದು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಮುಸ್ಲಿಮರ ಹಬ್ಬವಾದ ಮೊಹರಂ ಮೆರವಣಿಗೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಗಲಭೆಯಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಪರ್ವೇಜ್ ಪರ್ವಾಜ್ ಅವರು 2008 ರ ಸೆಪ್ಟೆಂಬರ್‌ 26 ರಂದು ದೂರು ಸಲ್ಲಿಸಿ ಯೋಗಿ ಆದಿತ್ಯನಾಥ್ ಅವರು ಯುವಕನ ಸಾವಿಗೆ ಪ್ರತಿಕಾರ ತೀರಿಸಿಕೊಳ್ಳುವ ದ್ವೇಷದ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪ ಮಾಡಿದ್ದರು.
ಇದನ್ನೂ ಓದಿ:2 ಕೋಟಿ ರೂ. ಇನ್ಶೂರೆನ್ಸ್​ ಹಣಕ್ಕಾಗಿ ತಾಯಿ,ಮಗನ ಮಾಸ್ಟರ್​ ಪ್ಲ್ಯಾನ್
ಪ್ರಕರಣ ಸಂಬಂಧ ಪರ್ವೇಜ್ ಪರ್ವಾಜ್ ಸಲ್ಲಿಸಿದ್ದ ಅರ್ಜಿ ಆಧರಿಸಿ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಪರ್ವೇಜ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಅಲಹಾಬಾದ್ ಹೈಕೊರ್ಟ್‍ಗೆ ಅರ್ಜಿ ಸಲ್ಲಿಸಿದರು. ಆದರೆ  ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತು. ಹೀಗಾಗಿ ಪರ್ವೇಜ್ ಅವರು ಹೈಕೋರ್ಟ್‍ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈಗಾಗಲೇ ಸುಪ್ರೀಂ ಕೋರ್ಟ್‍ನಲ್ಲಿ ಈ ಪ್ರಕರಣ ಇತ್ಯರ್ಥವಾಗಿದೆ. ಪುನಃ ಮೇಲ್ಮನವಿ ಸಲ್ಲಿಸುವ ಅಗತ್ಯವೇನಿದೆ ಎಂದು ಅರ್ಜಿದಾರರಿಗೆ ಪ್ರಶ್ನಿಸಿ ದಂಡವನ್ನು ವಿಧಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
