ನವದೆಹಲಿ:ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ಮಂಗಳವಾರ (ಜೂನ್​​ 25) ತಡೆ ನೀಡಿದೆ. ಕೆಳ ನ್ಯಾಯಾಲಯದ ಮುಂದೆ ಇಡಿ ಸಲ್ಲಿಸಿದ ದಾಖಲೆಯಲ್ಲಿನ ವಿಷಯವನ್ನು ಪರಿಗಣಿಸಲಾಗಿಲ್ಲ. ಈ ಅವಲೋಕನ ನ್ಯಾಯಸಮ್ಮತವಲ್ಲ ಎಂದು ನ್ಯಾಯಾಲಯ ಹೇಳಿದೆ.
ಇದನ್ನು ಓದಿ:ಸ್ಪೀಕರ್​ ಸ್ಥಾನಕ್ಕಾಗಿ ಚುನಾವಣೆ; ಎನ್​ಡಿಎ ಅಭ್ಯರ್ಥಿ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ಅವರಿದ್ದ ಪೀಠವು, ಜಾರಿ ನಿರ್ದೇಶನಾಲಯ ಸಲ್ಲಿಸಿದ ಸಾಕ್ಷ್ಯಗಳನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿಲ್ಲ ಮತ್ತು ಇಡಿ ತನ್ನ ವಾದವನ್ನು ಮಂಡಿಸಲು ಸೂಕ್ತ ಅವಕಾಶವನ್ನು ನೀಡಿಲ್ಲ ಎಂದು ಹೇಳಿದೆ. ಕೇಜ್ರಿವಾಲ್‌ಗೆ ಜಾಮೀನು ನೀಡಿ ಜೂನ್ 20ರಂದು ನೀಡಿದ್ದ ಕೆಳ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಆದೇಶ ನೀಡಿದೆ.
ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಹೆಚ್ಚು ವಿಷಯಗಳನ್ನು ಪರಿಗಣಿಸಲಾಗುವುದಿಲ್ಲ ಎಂಬ ವಿಚಾರಣಾ ನ್ಯಾಯಾಲಯದ ಅವಲೋಕನವು ಅನುಚಿತವಾಗಿದೆ. ಪಿಎಂಎಲ್‌ಎಯ ಕಡ್ಡಾಯ ಷರತ್ತುಗಳನ್ನು ಕೆಳ ನ್ಯಾಯಾಲಯದಲ್ಲಿ ಸಂಪೂರ್ಣವಾಗಿ ಕ್ರಾಸ್ ಎಕ್ಸಾಮಿನ್ ಮಾಡಲಾಗಿಲ್ಲ. ಜಾಮೀನು ಅರ್ಜಿಯ ಮೇಲಿನ ವಾದ ಮಂಡಿಸಲು ಇಡಿಗೆ ಅವಕಾಶ ನೀಡಬೇಕಿತ್ತು ಎಂದು ನ್ಯಾಯಾಲಯ ಹೇಳಿದೆ.
ಇದಕ್ಕೂ ಮುನ್ನ ಸೋಮವಾರ(ಜೂನ್​​ 26) ಜಾರಿ ನಿರ್ದೇಶನಾಲಯವು ತನ್ನ ಅರ್ಜಿಯ ಮೇಲೆ ದೆಹಲಿ ಹೈಕೋರ್ಟ್‌ಗೆ ಲಿಖಿತ ಉತ್ತರವನ್ನು ಸಲ್ಲಿಸಿದ್ದು, ಜಾಮೀನು ನೀಡುವ ವಿಚಾರಣಾ ನ್ಯಾಯಾಲಯದ ಆದೇಶವು ತಿರುಚಿರುವ ವಿಷಯಗಳನ್ನು ಆಧರಿಸಿದೆ ಎಂದು ತಿಳಿಸಿತು. ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಇಡಿ ಬಂಧಿಸಿತ್ತು. (ಏಜೆನ್ಸೀಸ್​)
826 ಕೋಟಿ ರೂಪಾಯಿ ಮೌಲ್ಯದ 350 ಕಾಮಗಾರಿಗಳನ್ನು ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
