ಬೆಂಗಳೂರು:ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ ಕೇಳಿಬಂದ ಬೆನ್ನಲ್ಲೇ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಕುಮಾರಸ್ವಾಮಿ ಬೆಲೆ ಏರಿಸುವಲ್ಲಿ ಬಿಜೆಪಿ ಸರ್ಕಾರದ್ದು ಸಾರ್ವಕಾಲಿಕ ದಾಖಲೆ ಮಾಡುತ್ತಿದ್ದು, ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ ಎಂದಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನಕ್ಕೆ ಇಳಿಯಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + seven =
Remember me
