ಫಿರೋಜಾಬಾದ್ :ಆಘಾತಕಾರಿ ಘಟನೆಯೊಂದರಲ್ಲಿ, ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಆಭರಣ ವ್ಯಾಪಾರಿಯೊಬ್ಬರನ್ನು ಅವರ ಸೋದರಸಂಬಂಧಿಯೇ ಜೀವಂತವಾಗಿ ಸುಟ್ಟುಹಾಕಿದ್ದಾನೆ ಎಂದು ಆರೋಪಿಸಲಾಗಿದೆ.ಈ ಘಟನೆ ಜಿಲ್ಲೆಯ ದ್ವಾರಕಧೀಶ್ ಪೊಲೀಸ್ ಔಟ್‌ಪೋಸ್ಟ್ ಬಳಿಯ ಮಾರುಕಟ್ಟೆಯಿಂದ ವರದಿಯಾಗಿದೆ.ವ್ಯಕ್ತಿಯನ್ನು ಸ್ಥಳೀಯ ಆಭರಣ ವ್ಯಾಪಾರಿ ರಾಕೇಶ್ ವರ್ಮಾ ಎಂದು ಗುರುತಿಸಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರಾಕೇಶ್ ಅವರ ಸೋದರಸಂಬಂಧಿ ರಾಬಿನ್ ಬೆಂಕಿ ಹಚ್ಚಿದನು.
ಇದನ್ನೂ ಓದಿ:ಹೆಸರಿಗೆ ರಾಮಸೇವಕ ದಾಸ… ಮಾಡಿದ್ದೆಲ್ಲ ಹೊಲಸು ಕೆಲಸ
ಶೇ. 90 ರಷ್ಟು ಸುಟ್ಟ ಗಾಯಗಳಾಗಿದ್ದ ರಾಕೇಶ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅಲ್ಲಿಂದ ಆಗ್ರಾ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಏತನ್ಮಧ್ಯೆ, ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಮಾಜವಾದಿ ಪಕ್ಷದ ಮುಖಂಡ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಫಿರೋಜಾಬಾದ್‌ನಲ್ಲಿ ವ್ಯಾಪಾರಿಯೊಬ್ಬರ ಸಜೀವ ದಹನದಂತಹ ದುಃಖದ ಸುದ್ದಿಯನ್ನು ಕೇಳುತ್ತಿದ್ದೇವೆ ಇದರಿಂದ ರಾಜ್ಯದ ನಾಯಕತ್ವ ಎಲ್ಲೋ ಹಾದಿ ತಪ್ಪಿದಂತೆ ಸಾಗುತ್ತಿರುವುದು ಗೋಚರವಾಗುತ್ತಿದೆ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ.
ಇದಪ್ಪಾ ನಿಜವಾದ ಶಿಕ್ಷಣವೆಂದರೆ…!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 1 =
Remember me
