ಪುಣೆ:ಯುವಕನೋರ್ವ ಗರ್ಭಿಣಿಯಾದ ಲಿವ್-ಇನ್ ಸಂಗಾತಿಯನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ  ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ.ರಂಜನ್​​ಗಾಂವ್ ಎಂಐಡಿಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಕರೇಗಾಂವ್ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ.27 ವರ್ಷದ ಆ ಯುವಕ ಆಕೆಯನ್ನು ಕೊಲೆ ಗೈದು ಪೊಲೀಸ್ ಠಾಣೆಗೆ ತೆರಳಿ 24 ವರ್ಷದ ಲಿವ್ -ಇನ್ ಸಂಗಾತಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ರಂಜಂಗಾಂವ್ ಪೊಲೀಸರು ದಾಖಲಿಸಿದ್ದಾರೆ.
ಇದನ್ನೂ ಓದಿ:ರೇವ್ ಪಾರ್ಟಿ ಮೇಲೆ ದಾಳಿ : 9 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯ ವಶ
ಆತ ಪೊಲೀಸ್ ಠಾಣೆಗೆ ಬಂದು ಒಂದು ತುಂಡು ಕಾಗದ ಮತ್ತು ಪೆನ್ನು ಕೇಳಿ ಪಡೆದ. ನಂತರ ಅದರಲ್ಲಿ ತಾನು ಖಿನ್ನತೆಯಿಂದ ಬಳಲುತ್ತಿರುವ ರೋಗಿಯಾಗಿದ್ದು. ಗರ್ಭಿಣಿ ಲಿವ್ – ಇನ್ ಸಂಗಾತಿಯನ್ನು ಕತ್ತು ಹಿಸುಕಿ ಕೊಂದಿದ್ದು, ತನಗೆ ಶಿಕ್ಷೆ ನೀಡಬೇಕೆಂದು ಕೋರಿದ.ನಂತರ ಆತ ಆಕೆಯೊಂದಿಗೆ ವಾಸಿಸುತ್ತಿದ್ದ ಮನೆಯ ಕೀಲಿಗಳನ್ನು ಹಸ್ತಾಂತರಿಸಿದ.ಮನೆ ತಲುಪಿ ಬಾಗಿಲು ತೆರೆದು ನೋಡಿದಾಗ ಮಹಿಳೆ ನೆಲದ ಮೇಲೆ ಸತ್ತು ಬಿದ್ದಿರುವುದು ಕಂಡು ಬಂದಿತು ಎಂದು ಪೊಲೀಸ್ ಪಿ.ಎನ್. ಸುತಾರ್ ತಿಳಿಸಿದ್ದಾರೆ. ಮೃತ ಮಹಿಳೆ ಮತ್ತು ಆರೋಪಿ ಕಳೆದ ನಾಲ್ಕೈದು ತಿಂಗಳಿನಿಂದ ಲಿವ್ ಇನ್ ಸಂಬಂಧದಲ್ಲಿದ್ದು, ಈ ಅವಧಿಯಲ್ಲಿ ಆಕೆ ಗರ್ಭಿಣಿಯಾಗಿದ್ದಳು ಎಂಬುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಸುದೀಕ್ಷಾ ಸಾವಿಗೆ ಸಂಬಂಧಿಸಿದಂತೆ ಇಬ್ಬರು ಅರಸ್ಟ್
ಗರ್ಭಪಾತಕ್ಕೆ ಹೋಗಲು ಅವರಿಬ್ಬರಿಗೂ ಹಣವಿಲ್ಲದ ಕಾರಣ, ಅವರು ಆಗಾಗ್ಗೆ ಜಗಳವಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ ಅವರ ಮಧ್ಯೆ ನಡೆದ ವಾಗ್ವಾದ ತಾರಕಕ್ಕೇರಿ ಆ ವ್ಯಕ್ತಿ ಕೋಪದಿಂದ, ಅವಳ ಕತ್ತು ಹಿಸುಕಿ, ಹೊರಗಿನಿಂದ ಬಾಗಿಲನ್ನು ಲಾಕ್ ಮಾಡಿ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಬ್ ಇನ್ಸ್‌ಪೆಕ್ಟರ್ ಶುಭಾಂಗಿ ಕುಟೆ ತಿಳಿಸಿದ್ದಾರೆ.ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ ಹಳ್ಳಿಗರು; ಸ್ಥಳಕ್ಕೆ ಹೋದ ಅಧಿಕಾರಿಗಳನ್ನೂ ಅವರೇ ಕಾಪಾಡಬೇಕಾಯ್ತು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − two =
Remember me
